ತಿ. ನರಸೀಪುರ: ಬಿಎಸ್ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಕಾರ್ಯಕರ್ತರೊಡನೆ ಛತ್ರಪತಿ ಸಾಹು ಮಹಾರಾಜ್ ಮತ್ತು ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.
ಕಾರ್ಯಕ್ರಮ ಕುರಿತು ಬಿಎಸ್ಪಿ ಯ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಮಾತನಾಡಿ ಅಂದಿನ ಕಾಲಘಟ್ಟದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿಯ ಕ್ರಾಂತಿಕಾರಿ ಛತ್ರಪತಿ ಸಾಹುಮಹಾರಾಜ್ ರವರು
ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಅವರು ಛತ್ರಪತಿ ಸಾಹು ಮಹಾರಾಜರನ್ನು ಸಾಮಾಜಿಕ ಪ್ರಜಾಪ್ರಭುತ್ವ ವ್ಯವಸ್ಥೆಯ ಆಧಾರ ಸ್ಥಂಭ ಎಂದು ಹೇಳಿದ್ದರು ಎಂದು ಹೇಳಿದರು.
ಈ ಸಂದರ್ಭ ಬಿ.ಎಸ್.ಪಿ ಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್ ಪುಟ್ಟಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಬಸವಣ್ಣ,ಜಿಲ್ಲಾ ಸಂಯೋಜಕ ಯರಗನಹಳ್ಳಿ ಮಹದೇವಸ್ವಾಮಿ, ತಾಲೂಕು ಪ್ರಧಾನ ಕಾರ್ಯದರ್ಶಿ ಪುಟ್ಟಮರುಡಯ್ಯ, ತಾಲೂಕು ಸಂಯೋಜಕ ಪುಟ್ಟರಾಜು, ಶಿವಮೂರ್ತಿ, ಕೈಯಂಬಳ್ಳಿ ಪುಟ್ಟಸ್ವಾಮಿ ಸೇರಿದಂತೆ ಇತರರು ಇದ್ದರು.

