ನಂಜನಗೂಡು: ಆಕ್ಸಿಜನ್ ಸೌಲಭ್ಯ ಇಲ್ಲದ ಸರ್ಕಾರಿ ಆಂಬುಲೆನ್ಸ್ ನಲ್ಲಿ ಮಗು ಸಾವನ್ನಪ್ಪಿದ ಘಟನೆ ನಂಜನಗೂಡಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಿಂದ ಮೈಸೂರಿನ ದೊಡ್ಡಸ್ಪತ್ರೆಗೆ ತೆರಳುತ್ತಿದ್ದ ಆಂಬುಲೆನ್ಸ್ ನಲ್ಲಿ ನಡೆದಿದೆ.
ನಂಜನಗೂಡು ನಗರದ ಶ್ರೀರಾಂಪುರ ಬಡಾವಣೆಯ ರತ್ನಮ್ಮ ಮತ್ತು ಕುಮಾರ್ ಎಂಬ ದಂಪತಿಗಳ ಮಗು. ಕಳೆದ 17ನೆಯ ತಾರೀಖಿನಂದು ಹೆರಿಗೆಗೆ ಎಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರತ್ನಮ್ಮ ದಾಖಲಾಗಿದ್ದರು. ರತ್ನಮಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆಯಾದ ಬಳಿಕ ಮಗು ಆರೋಗ್ಯಕರವಾಗಿದ್ದು ಕ್ಷಣಾರ್ಧದಲ್ಲಿಯೇ ನೀಲಿ ಬಣ್ಣಕ್ಕೆ ತಿರುಗಿದೆ.
ಹುಟ್ಟಿದ ಮಗು ನೀಲಿ ಬಣ್ಣಕ್ಕೆ ತಿರುಗಿದ ಪರಿಣಾಮ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ದಾದಿಯರು ಗಾಬರಿಯಾಗಿದ್ದಾರೆ. ನಂತರ ಮಗು ಸ್ಥಿತಿ ನೋಡಿ ಪೋಷಕರು ಕೂಡ ಆತಂಕಕ್ಕೆ ಒಳಗಾಗಿದ್ದರು. ಮಗುವಿನ ಸ್ಥಿತಿಗತಿ ನೋಡಿ ಮೈಸೂರಿನ ಮಕ್ಕಳ ಆಸ್ಪತ್ರೆಗೆ ದಾಖಲಿಸಲು ಆಸ್ಪತ್ರೆಯ ಸಿಬ್ಬಂದಿಗಳ ಮುಂದಾಗಿದ್ದಾರೆ.

ಸರ್ಕಾರಿ ಆಸ್ಪತ್ರೆಯ ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಕೊರತೆ ತಿಳಿದಿದ್ದರು ಮೈಸೂರಿಗೆ ರವಾನಿಸಿದ ನಂಜನಗೂಡಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಿಬ್ಬಂದಿಗಳು. ಮೈಸೂರಿಗೆ ತೆರಳುತ್ತಿದ್ದ ಮಾರ್ಗ ಮಧ್ಯದಲ್ಲಿ ಮಗು ಸಾವನ್ನಪ್ಪಿದೆ. ನಂಜನಗೂಡಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸಿಬ್ಬಂದಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷಿತನ ಮಗುವಿನ ಸಾವಿಗೆ ಕಾರಣ ಎಂದು ಪೋಷಕರ ಆರೋಪ ಕೇಳಿಬಂದಿದೆ.
ಆಕ್ಸಿಜನ್ ಇಲ್ಲದ ಆಂಬುಲೆನ್ಸ್ ನಲ್ಲಿ ಹೆಚ್ಚಿನ ಚಿಕಿತ್ಸೆಗೆ ಎಂದು ಹುಟ್ಟಿದ ಮಗುವನ್ನು ಪೋಷಕರ ಜೊತೆ ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ಅಧಿಕಾರಿಗಳು ರವಾನಿಸಿದ್ದಾರೆ. ಮಗು ಕಳೆದುಕೊಂಡ ತಾಯಿ ರತ್ನಮ್ಮ ನಂಜನಗೂಡಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪೋಷಕರ ಜೊತೆಗೂಡಿ ರೋಧನೆ ಪಡುತ್ತಿದ್ದಾರೆ. ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಮಾಯ ಚಿಕಿತ್ಸೆಗೆ ತೆರಳುತ್ತಿದ್ದ ಮಗು ಸಾವನ್ನಪ್ಪಿದೆ.

