ನಂಜನಗೂಡು: ಚಿಕಿತ್ಸೆ ಫಲಿಸದೆ ಮೃತಪಟ್ಟ ಮಗುವಿನ ಸಾವಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ನಂಜನಗೂಡು ಮನ ಮಿಡಿದಿದೆ. ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದ ಮಹೇಶ್, ರಾಣಿ ಎಂಬ ದಂಪತಿಗಳ ಐದು ವರ್ಷದ ಆದ್ಯ ಮಗು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.

ಬದನವಾಳು ಗ್ರಾಮದ ಚಾಮರಾಜನಗರ ಮತ್ತು ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ನಡೆದ ಭೀಕರ ಅಪಘಾತದಲ್ಲಿ ಗಾಯಗೊಂಡು ದಂಪತಿಗಳು ಮತ್ತು ಇಬ್ಬರು ಮಕ್ಕಳಿಗೆ ಗಂಭೀರ ಗಾಯಗೊಂಡು ಮೈಸೂರಿನ ಬೃಂದಾವನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಾಗುತ್ತಿತ್ತು.

ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಹಣ ಇಲ್ಲದೆ ಕುಟುಂಬಸ್ಥರು ಪರದಾಡುತ್ತಿದ್ದರು. ಮಗುವಿಗೆ ಚಿಕಿತ್ಸೆ ಕೊಡಿಸಲು ಮಗುವಿನ ದೊಡ್ಡಮ್ಮ ಮಂಗಳಮ್ಮ ಭಿಕ್ಷೆಯನ್ನು ಬೇಡುತ್ತಿರುವ ವಿಡಿಯೋ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನಂತರ ಮೈಸೂರಿನ ಕೆಆರ್ ಆಸ್ಪತ್ರೆಗೆ ರವಾನಿಸಲಾಯಿತು.

ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಇದನ್ನು ಮನಗಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆಯವರು ಕುಟುಂಬಕ್ಕೆ ಸಹಾಯ ಧನ ನೀಡುವಂತೆ ಸೂಚಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಯೋಜನಾಧಿಕಾರಿ ಮಾಧವ್ ಕುಲಾಲ್, ಪ್ರಬಂಧರಾದ ಯಶವಂತ್, ಮೇಲ್ವಿಚಾರಕಿ ಎಂ.ಡಿ ಧನಲಕ್ಷ್ಮೀ, ಸೇವಾ ಪ್ರತಿನಿಧಿ ಲಕ್ಷ್ಮೀ ಭೇಟಿ ನೀಡಿ ಸಾಂತ್ವನ ಹೇಳಿ ಆತ್ಮಸ್ಥೈರ್ಯ ತುಂಬಿದರು.

ತುರ್ತಾಗಿ 25 ಸಾವಿರ ಸಹಾಯಧನದ ಚೆಕ್ ವಿತರಿಸಿ, ಸಹಾಯ ಹಸ್ತ ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಮಾದನಾಯಕ, ಗೋಪಾಲ್, ಗೋಪಾಲ ನಾಯಕ, ನಂಜುಂಡ ನಾಯಕ, ಗಂಗಪ್ಪ, ಮಹದೇವ, ವೆಂಕಟೇಶ್ ಮಹೇಶ್ ಹಾಜರಿದ್ದರು.