ನಂಜನಗೂಡು: ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಜನ ಸಂಗ್ರಾಮ ಪರಿಷತ್ ವತಿಯಿಂದ ಕೆಲವು ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಸ್ಪಂದಿಸಿದ್ದಾರೆ ಅವರಿಗೆ ನಾವು ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಜನ ಸಂಗ್ರಾಮ ಪರಿಷತ್ ರಾಜ್ಯ ಗೌರವಾಧ್ಯಕ್ಷ ನಗರ್ಲೆ ಎಂ.ವಿಜಯ್ ಕುಮಾರ್ ಹೇಳಿದರು.
ನಂಜನಗೂಡಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ನಗರ್ಲೆ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರಿಗೆ ನಿವೇಶನ ಇಲ್ಲ . ಇನ್ನು ಕೂಡ ಅವಿಭಕ್ತ ಕುಟುಂಬಗಳಲ್ಲಿ ವಾಸ ಮಾಡುತ್ತಿದ್ದಾರೆ ಅವರಿಗೆ ನಿವೇಶನ ನೀಡುವಂತೆ ಮನವಿ ಮಾಡಿದ್ದೇವು.
ಡಿಜಿಟಲ್ ಗ್ರಂಥಾಲಯ ನಿರ್ಮಾಣ, ಹೆರಿಗೆ ಆಸ್ಪತ್ರೆ, ರಾಷ್ಟ್ರೀಕೃತ ಬ್ಯಾಂಕ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ರವರ ಮೂಲಕ ಮನವಿಯನ್ನು ಜನ ಸಂಗ್ರಾಮ ಪರಿಷತ್ ವತಿಯಿಂದ ಸಲ್ಲಿಸಿದ್ದೆವು.
ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿಗಳು ಸಂಬಂಧಪಟ್ಟ ಇಲಾಖೆಗಳಿಗೆ ಪತ್ರ ಬರೆದು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಇದು ಸಂತೋಷದ ವಿಚಾರ. ಅಧಿಕಾರಿಗಳು ಭೇಟಿ ನೀಡಿ ಸ್ಥಳವನ್ನು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಬೇಕು. ಹಾಗೆ ಅನುಷ್ಠಾನಕ್ಕೆ ತರಬೇಕು ಎಂಬುದು ನಮ್ಮ ಒತ್ತಾಯ.
ಪತ್ರ ವ್ಯವಹಾರದಲ್ಲೇ ಮುಗಿದು ಹೋಗಬಾರದು ಅನುಷ್ಠಾನಕ್ಕೆ ತರುವ ಮೂಲಕ ರಾಜ್ಯದ ಜನರಿಗೆ ಮುಖ್ಯಮಂತ್ರಿಗಳ ಕೆಲಸ ಕಾರ್ಯಗಳು ತಿಳಿಯಬೇಕು. ಒಂದು ವೇಳೆ ಅನುಷ್ಠಾನ ಮಾಡದೇ ಇದ್ದಲ್ಲಿ ಗ್ರಾಮಸ್ಥರೆಲ್ಲರೂ ಸೇರಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

