ಮೈಸೂರು: ಸಿಎಂ ಸಿದ್ದರಾಮಯ್ಯಗೆ ಮತ್ತೆ ಮುಡಾ ಸಂಕಷ್ಟ ಎದುರಾಗಿದ್ದು, ಲೋಕಾಯುಕ್ತ ವರದಿ ತಿರಸ್ಕರಿಸಿ ಎಂದು ಜನಪ್ರತಿನಿಧಿಗಳ ನ್ಯಾಯಲಯಕ್ಕೆ ಇಡಿ ಅರ್ಜಿ ಸಲ್ಲಿಸಿದೆ. ಜನಪ್ರತಿನಿಧಿಗಳ ನ್ಯಾಯಲಯಕ್ಕೆ ಇಡಿ ತಕರಾರು ಅರ್ಜಿ ಸಲ್ಲಿಸಿದೆ.

ಒಟ್ಟು 8 ಪುಟಗಳ ತಕರಾರು ಅರ್ಜಿಯಾಗಿದ್ದು, ತಕರಾರು ಅರ್ಜಿಯಲ್ಲಿ ಸಿಎಂ ಹಾಗೂ ಸಿಎಂ ಕುಟುಂಬದ ವಿರುದ್ಧ ಸಾಕಷ್ಟು ಸಾಕ್ಷಿ ಇದೆ. ನಮ್ಮ ತನಿಖೆಯಲ್ಲಿ ಅವರು ತಪ್ಪುಗಳು ಸಾಬೀತಾಗಿದೆ. ಈಗಿದರೂ ಅವರು ಯಾವ ತಪ್ಪು ಮಾಡಿಲ್ಲ ಎಂದು ಹೇಳಿರುವುದು ಸರಿಯಲ್ಲ. ಈಗಾಗಿ ಲೋಕಾಯುಕ್ತ ವರದಿಯನ್ನ ತಿರಸ್ಕರಿಸಿ ಎಂದು ಇಡಿ ತಕರಾರು ಅರ್ಜಿ ಸಲ್ಲಿಸಿದೆ.