ಮೈಸೂರು: ಬಸವ ಜಯಂತಿ ಕಾರ್ಯಕ್ರಮ ಮೈಸೂರಿನ ಕಲಾಮಂದಿರದಲ್ಲಿ ನಡೆಯಿತು. ಕೇಸರಿ ಶಾಲು ಹಾಕಿಕೊಂಡು ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭಾಗಿಯಾದರು.
ದೀಪ ಬೆಳಗಿ ಬಸವೇಶ್ವರ ಪುತ್ಥಳಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿದರು. ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗು ವಿವಿಧ ಸಂಘ ಸಂಸ್ಥೆಗಳ ಒಕ್ಕೂಟದ ವತಿಯಿಂದ ಆಯೋಜನೆ ಮಾಡಲಾಯಿತು.
ಕಲಾಮಂದಿರದಲ್ಲಿ ಸುತ್ತೂರು ಮಠಾಧಿಪತಿ ಶ್ರೀ ಶಿವರಾತ್ರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯ ಸಮಾರಂಭ ನಡೆಯಿತು. ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ, ರಹೀಂ ಖಾನ್, ಶಾಸಕರಾದ ಜಿ ಟಿ ದೇವೇಗೌಡ, ತನ್ವೀರ್ ಸೇಠ್, ಗಣೇಶ್ ಪ್ರಸಾದ್, ಡಿ ರವಿಶಂಕರ್, ದರ್ಶನ್ ಧ್ರುವನಾರಾಯಣ್, ಕೆ ಹರೀಶ್ ಗೌಡ, ಶ್ರೀವತ್ಸ ಸೇರಿದಂತೆ ಇನ್ನಿತರ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

