ಮೈಸೂರು : ಸದನದಲ್ಲಿ ಹೈ ಕಮಾಂಡ್ ಅವಕಾಶ ಕೊಟ್ಟರೆ ನಾನೇ ಇನ್ನೆರಡು ಬಜೆಟ್ ಮಂಡನೆ ಮಾಡುತ್ತೇನೆ ಎಂಬ ವಿಚಾರವಾಗಿ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ನಾನೇ ಇನ್ನೂ ಎರಡು ಬಜೆಟ್ ಮಂಡನೆ ಮಾಡುತ್ತೇನೆ. ಎಲ್ಲವು ಹೈ ಕಮಾಂಡ್ ಗೆ ಬಿಟ್ಟಿದ್ದು. ಚುನಾವಣೆಗೂ ಅದಕ್ಕೂ ಸಂಬಂಧವಿಲ್ಲ ಎಂದರು. ಮೈಸೂರಿನಲ್ಲಿ ಡ್ರಗ್ಸ್ ಪತ್ತೆ ವಿಚಾರವಾಗಿ ಮಾತನಾಡಿ, ನಾವು ಡ್ರಗ್ಸ್ ಮುಕ್ತ ರಾಜ್ಯ ಮಾಡಲು ಕೆಲಸ ಮಾಡುತ್ತಿದ್ದೇವೆ. ಈಗ ಪೊಲೀಸರು ರೇಡ್ ಮಾಡಿದ ವಿಚಾರ ಗೊತ್ತಾಯ್ತು. ಮುಂಬೈ ಲಿಂಕ್ ಇರ್ಲಿ ಯಾವುದೇ ಇರಲಿ. ಡ್ರಗ್ಸ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಹೇಳಿದ್ದೇನೆ ಎಂದರು.

