ನಂಜನಗೂಡು: ವರುಣ ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರ 78ನೇ ವರ್ಷದ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.

ನಂಜನಗೂಡು ತಾಲ್ಲೂಕಿನ ಸುತ್ತೂರು ಮತ್ತು ಹಾರೋಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿಗಳನ್ನು ತಗಡೂರು ಕಾಂಗ್ರೆಸ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಡ್ಯ ರಂಗಸ್ವಾಮಿ ವಿತರಿಸಿದರು.

ಬಳಿಕ ಮಾತನಾಡಿದ ಅವರು, ನಮ್ಮ ವರುಣ ಕ್ಷೇತ್ರದ ಶಾಸಕರು ಹಾಗೂ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿಕೊಂಡು ಬರುತ್ತಿದ್ದೇವೆ. ಸುಮಾರು ವರ್ಷಗಳಿಂದ ಡಾ.ಯತೀಂದ್ರ ಸಿದ್ದರಾಮಯ್ಯ ರವರ ಅಭಿಮಾನಿಗಳ ಬಳಗದ ವತಿಯಿಂದ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಿಕೊಂಡು ಬರಲಾಗುತ್ತಿದೆ. ಸಿದ್ದರಾಮಯ್ಯ ಅವರಿಗೆ ರಾಜ್ಯದಲ್ಲಿ ಒಳ್ಳೆಯ ಆಡಳಿತ ನೀಡಲು ಜನರು ಆಶೀರ್ವಾದ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಜನಪ್ರಿಯ ಯೋಜನೆಯನ್ನು ಜಾರಿ ಮಾಡಿದ್ದಾರೆ. ಜನರು ನೆಮ್ಮದಿಯಿಂದ ಬದಕುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ರಾಜ್ಯವನ್ನು ಒಳ್ಳೆಯ ದಿಕ್ಕಿನಲ್ಲಿ ತೆಗೆದುಕೊಂಡು ಹೋಗುತ್ತಾರೆ. ಐದು ಗ್ಯಾರಂಟಿ ಯೋಜನೆಗಳಿಂದ ಜನರು ಬದುಕು ಕಟ್ಟಿಕೊಂಡಿದ್ದಾರೆ. ಸಿದ್ದರಾಮಯ್ಯ ರವರು ವರುಣ ಕ್ಷೇತ್ರದಿಂದ ಸ್ಪರ್ಧಿಸಿ ಎರಡು ಬಾರಿ ಮುಖ್ಯಮಂತ್ರಿಗಳಾಗಿದ್ದಾರೆ ಎಂದರೆ ಅದಕ್ಕೆ ವರುಣಾ ಕ್ಷೇತ್ರದ ಜನರು ಕಾರಣ. ಬಡವರು, ದೀನ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದಾರೆ.  ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಗ್ರಾ.ಪಂ ಅಧ್ಯಕ್ಷ ಸುತ್ತೂರು ಸೋಮಣ್ಣ,   ಎಸ್‌.ಸಿ ಬ್ಲಾಕ್ ಅಧ್ಯಕ್ಷ  ಸೋಮಸುಂದರ, ಮಾಜಿ ತಾಪಂ ಸದಸ್ಯ ಬಿ.ಸಿ ಪುರುಷೋತ್ತಮ್, ಡಾ.ಯತೀಂದ್ರ ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ಬಿಳುಗಲಿ ಕುಮಾರ್, ತಾಯೂರು ಗ್ರಾ.ಪಂ ಉಪಾಧ್ಯಕ್ಷ ಹಾರೋಪುರ ಕುಮಾರ್ , ಮಾಜಿ ಗ್ರಾಪಂ ಸದಸ್ಯ ಹಾರೋಪುರ ನಾಗರಾಜ್, ಸಮಾಜ ಸೇವಕ ಗಾರ್ಡನ್ ಮಹೇಶ್ ತಗಡೂರು, ಕಾಂಗ್ರೆಸ್ ಮುಖಂಡರಾದ ಚಿನ್ನಂಬಳ್ಳಿ ಸಿ.ಆರ್ ಮಹದೇವ್, ಮೂಡಹಳ್ಳಿ ಮಹದೇವಸ್ವಾಮಿ, ಹನಿಯಂಬಳ್ಳಿ ಗುರುಪಾದ, ಸುರೇಶ್ ತಗಡೂರು ಸೇರಿದಂತೆ ಹಲವರು ಭಾಗವಹಿಸಿದ್ದರು.