ನಂಜನಗೂಡು: ಗಾಳಿ ಮಳೆಗೆ ತೆಂಗಿನ ಮರ ಮನೆ ಮೇಲೆ ಮುರಿದು ಬಿದ್ದಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ.
ಬಿರುಗಾಳಿ ಸಹಿತ ಭಾರಿ ಮಳೆಗೆ ಮೂರು ಮನೆಗಳ ಮೇಲ್ಚಾವಣಿ ಹಾರಿ ಹೋಗಿ ಅಪಾರ ನಷ್ಟ ಉಂಟಾಗಿದೆ. ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ನ ಜೈಮಾಲಾ ಎಂಬುವರಿಗೆ ಸೇರಿದ ಮನೆ ಮೇಲೆ ಮನೆಯ ಹಿಂಭಾಗದಲ್ಲಿದ್ದ ಬೃಹತ್ ಗಾತ್ರದ ತೆಂಗಿನ ಮರವೊಂದು ಮನೆಯ ಮೇಲೆ ಬಿದ್ದು, ಮನೆ ಸಂಪೂರ್ಣವಾಗಿ ಜಖಂಗೊಂಡಿದೆ. ಮನೆಯಲ್ಲಿದ್ದ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪಟ್ಟಣದ 18ನೇ ವಾರ್ಡ್ ನಲ್ಲಿ ಜ್ಯೋತಿ, ವೃಷಭ ಬಾನು, ಶಭ ಪಿರ್ದೋಶ ರವರ ಮನೆಯ ಮೇಲ್ಛಾವಣಿ ಹಾರಿ ಹೋಗಿವೆ. ಮನೆಯಲ್ಲಿದ್ದ ದವಸ ಧಾನ್ಯಗಳು ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಯಾಗಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.
ಸ್ಥಳಕ್ಕೆ ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ, ಉಪಾಧ್ಯಕ್ಷೆ ರಿಯಾನ ಬಾನು, ನಗರಸಭಾ ಆಯುಕ್ತ ವಿಜಯ್, ನಗರಸಭಾ ಸದಸ್ಯೆ ಮೀನಾಕ್ಷಿ ನಾಗರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

