News Karnataka Kannada
Wednesday, May 01 2024
ಮೈಸೂರು

ವರ್ಗಾವಣೆಗೆ ಮಧ್ಯವರ್ತಿಗಳ ಮೊರೆಹೋಗಬೇಡಿ ನನ್ನ ಬಳಿ ನೇರವಾಗಿ ಬನ್ನಿ: ಸಚಿವ ಬೋಸರಾಜು

Come to me for transfer: Minister Bosaraju
Photo Credit : By Author

ಮೈಸೂರು: ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ನೇರವಾಗಿ ನನ್ನ ಬಳಿಗೆ ಬನ್ನಿ. ಅನುಕೂಲ ಮಾಡಿಕೊಡೋಣ. ಆದರೆ ಈ ವಿಚಾರದಲ್ಲಿ ಮಧ್ಯವರ್ತಿಗಳು  ಬೇಡ. ಏನೇ ಸಮಸ್ಯೆ ಇದ್ದರೂ ಕೂಡ ನನ್ನ ಬಳಿಯೇ ಹೇಳಿ ಎಂದು ಇಲಾಖೆ ಇಂಜಿನಿಯರ್‌ಗಳಿಗೆ ಸಣ್ಣ ನೀರಾವರಿ ಇಲಾಖೆ ಸಚಿವ ಬೋಸರಾಜು ಕಿವಿಮಾತು ಹೇಳಿದರು.

ನಗರದ ಪ್ರಾದೇಶಿಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಮೈಸೂರು ವಿಭಾಗ ಮಟ್ಟದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದ ಸಚಿವರು, ಇಲಾಖೆ ಇಂಜಿನಿಯರ್‌ಗಳಿಗೆ ಸ್ಥಳಕ್ಕೆ ನಿರಂತರವಾಗಿ ಭೇಟಿ ನೀಡಿದರೆ ಸಮಸ್ಯೆಯ ವಾಸ್ತವದ ಸ್ಥಿತಿಗತಿ ತಿಳಿಯುತ್ತದೆ. ಜತೆಗೆ ಪರಿಹಾರ ಕಂಡು ಹಿಡಿಯಲು ಸುಲಭವಾಗುತ್ತದೆ ಎಂದು ಸಲಹೆ ನೀಡಿದರು.

ಸಣ್ಣ ನೀರಾವರಿ ಇಲಾಖೆಯ ಎಲ್ಲಾ ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣ ಆಗುವುದರ ಜತೆಗೆ ಗುಣಮಟ್ಟ ಕಾಪಾಡಿಕೊಳ್ಳಬೇಕು. ಕಾಗದದ ಮೇಲಿನ ಪ್ರಗತಿಯನ್ನು ಒಪ್ಪಲು ಸಾಧ್ಯವಿಲ್ಲ. ವಾಸ್ತವದ ನೆಲೆಯಲ್ಲಿ ಪ್ರಗತಿ ಆಗಬೇಕು. ಇಲ್ಲದಿದ್ದರೆ ಸಂಬಂಧಪಟ್ಟವರನ್ನು ಜವಾಬ್ದಾರರನ್ನಾಗಿ  ಮಾಡಲಾಗುವುದು ಎಂದರು.

ತಮಗೆ ನೀಡುವ ಮಾಹಿತಿ ವಾಸ್ತವತೆಯಿಂದ ಕೂಡಿರಬೇಕು. ಕಾಗದ ಮೇಲಿನ ಅಂಕಿ ಅಂಶಗಳನ್ನು ನಂಬುವುದಿಲ್ಲ. ಮಳೆಗಾಲ ಆರಂಭವಾಗಿದ್ದು  ಕೆರೆಗಳ ದುರಸ್ತಿ ಕೆಲಸ ತ್ವರಿತವಾಗಿ ಆಗಬೇಕು. ಕೆರೆಗಳು ಒಡೆದರೆ ಬಡ ರೈತರಿಗೆ ತೊಂದರೆಯಾಗುತ್ತದೆ. ಕೆರೆ ಕಟ್ಟೆಗಳು ಮತ್ತು ಏತ ನೀರಾವರಿ ಮೂಲಕ ಬೆಳೆಗಳಿಗೆ ಸಮರ್ಪಕವಾಗಿ ನೀರು ಒದಗಿಸಬೇಕು. ಸರ್ಕಾರ ಮತ್ತು ಇಲಾಖೆ ನಡುವೆ ಸಮನ್ವಯತೆ ಇದ್ದರೆ ಮಾತ್ರ ಸುಲಭವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯ. ಹಿಂದೆ ತಪ್ಪುಗಳು ಆಗಿದ್ದರೆ ಸರಿಪಡಿಸಿಕೊಂಡು ಹೋಗಬೇಕು. ವಿಶೇಷ ಘಟಕ ಯೋಜನೆ ಅಡಿ ಅಂತರ್ಜಲ ಅಭಿವೃದ್ಧಿ ಮತ್ತು ಏತ ನೀರಾವರಿ ಯೋಜನೆಗಳ ಪುನರ್ಜೀವನಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದು ಇಂದಿನ ತುರ್ತು ಅಗತ್ಯವಾಗಿದೆ. ಈ ಬಗ್ಗೆ ನಿರ್ಲಕ್ಷ ಸಲ್ಲುದು ಎಂದು ಇಂಜಿನಿಯರ್‌ಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆ ಮುಖ್ಯ ಇಂಜಿನಿಯರ್ ರಾಘವನ್, ಅಧೀಕ್ಷಕ ಇಂಜಿನಿಯರ್ ಕಿಶೋರ್ ಮತ್ತು ಮಂಗಳೂರು, ಹಾಸನ, ಮೈಸೂರು, ಚಿಕ್ಕಮಂಗಳೂರು, ಚಾಮರಾಜನಗರ, ಕೊಡಗು ಹಾಗೂ ಮಂಡ್ಯ ಜಿಲ್ಲೆಗಳ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಮತ್ತು ಅಧಿಕಾರಿಗಳು  ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು