ಮೈಸೂರು: ಸಣ್ಣಪುಟ್ಟ ವ್ಯಾಪಾರಿಗಳಿಗೂ ವಾಣಿಜ್ಯ ತೆರಿಗೆ, ಜಿಎಸ್ಟಿ ಹೊರೆ ಬಿದ್ದಿದ್ದು, ರಾಜ್ಯ ಸರ್ಕಾರದ ನಿರ್ಧಾರ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಕರ್ನಾಟಕ ಸೇನ ಪಡೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧ್ಯಕ್ಷ ತೇಜಸ್ ಲೋಕೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ಸರ್ಕಾರ ತಮ್ಮ ಆದೇಶ ವಾಪಸ್ ಪಡೆಯಲು ಒತ್ತಾಯಿಸಲಾಯಿತು. ಪ್ರತಿಭಟನೆಯಲ್ಲಿ ಹಲವು ಸಂಘಟನೆಗಳ ಮುಖಂಡರು ಭಾಗಿಯಾಗಿದ್ದರು.