Categories: ಮೈಸೂರು

ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ: ಈಶ್ವರಖಂಡ್ರೆ

ಕೆ.ಆರ್.ನಗರ: ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಮತ್ತು ಜನವಿರೋಧಿ ನೀತಿಯಿಂದ ರಾಜ್ಯದ ಜತೆಗೆ ಬೇಸತ್ತಿದ್ದು ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರು ಆದ ಶಾಸಕ ಈಶ್ವರಖಂಡ್ರೆ ಹೇಳಿದರು.

ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಬಿಜೆಪಿಯ ವಿರುದ್ದ ಹೋರಾಡಲು ಕಾಂಗ್ರೆಸ್ ಪಕ್ಷದ ವತಿಯಿಂದ ಸಿದ್ದತೆ  ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ ಕಾರ್ಯಾಧ್ಯಕ್ಷರು ವಿಶೇಷವಾಗಿ ಯುವ ಜನತೆ ನಮ್ಮ ಪಕ್ಷವನ್ನು ಬೆಂಬಲಿಸಬೇಕೆಂದು ಕೋರಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೈ, ಬಾಯಿಯನ್ನು ಬಿಜೆಪಿಯವರೇ ಕಟ್ಟಿ ಹಾಕಿದ್ದು ವಿರೋಧ ಪಕ್ಷದವರ ಪ್ರಶ್ನೆಗಳಿಗೆ ಮುಖ್ಯಮಂತ್ರಿಯಿಂದ ಉತ್ತರ  ಬಾರದಂತಾಗಿದೆ, ಇಂತಹ ನಿರ್ಲಕ್ಷ್ಯ ಹಾಗೂ ಬೇಜವಬ್ದಾರಿ ಸರ್ಕಾರ ಕಿತ್ತೊಗೆಯಲು ರಾಜ್ಯ ಜನತೆ ತೀರ್ಮಾನ ಮಾಡಿದ್ದಾರೆ ಎಂದರು.

ಜೆಡಿಎಸ್ ಹೆಸರಿಗೆ ಮಾತ್ರ ಜಾತ್ಯತೀತವಾಗಿದ್ದು ಅದು ಬಿಜೆಪಿಯ ಬಿ.ಟೀಂ ಪಕ್ಷ ಎಂದು ಟೀಕಿಸಿದ ಈಶ್ವರಖಂಡ್ರೆ ಜೆಡಿಎಸ್‌ಗೆ ಮತ ನೀಡಿದರೆ ಬಿಜೆಪಿಗೆ ನೀಡಿದಂತಾಗಲಿದ್ದು  ಯಾವುದೇ ಕಾರಣಕ್ಕೂ ಜೆಡಿಎಸ್ ಪಕ್ಷವನ್ನು ಬೆಂಬಲಿಸ ಬಾರದೆಂದು ಮನವಿ ಮಾಡಿದ್ದಲ್ಲದೆ ಜೆಡಿಎಸ್‌ನವರು ಅವಕಾಶವಾದಿಗಳಾಗಿದ್ದು ಅಧಿಕಾರಕ್ಕಾಗಿ ಯಾರೊಂದಿಗೆ ಬೇಕಾದರೂ ಮೈತ್ರಿ ಮಾಡಿಕೊಳ್ಳುತ್ತಾರೆ ಎಂದು ದೂರಿದರು.

ಕೆ.ಆರ್.ನಗರ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲಿರುವ ಡಿ.ರವಿಶಂಕರ್ ಅವರ ಗೆಲುವಿಗೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ದುಡಿಯಬೇಕು  ಎಂದು ಸೂಚಿಸಿದಲ್ಲದೆ ತಾವು ಎರಡು ದಿನಗಳ ಕಾಲ ಚುನವಣೆ ಸಂದರ್ಭದಲ್ಲಿ ರವಿಶಂಕರ್ ಪರ ಪ್ರಚಾರ ಮಾಡುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವುದು ಖಚಿತಗೊಂಡಿರುವುದರನ್ನು ಮನಗಂಡಿರುವ ಬಿಜೆಪಿ ಮತ್ತು ಜೆಡಿಎಸ್‌ನವರು ಕಾಂಗ್ರೆಸ್  ಪಕ್ಷದ ನಾಯಕತ್ವದಲ್ಲಿ ಗೊಂದಲವಿದೆ ಎಂದು ಅಪಪ್ರಚಾರದಲ್ಲಿ ತೊಡಗಿದ್ದಾರೆ ಇದರಲ್ಲಿ ಅವರುಗಳು ಯಶಸ್ವಿ ಕಾಣಲು ಸಾಧ್ಯವಿಲ್ಲ ಎಂದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ಸನ್ಮಾನಿಸಲಾಯಿತು. ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ, ಕಾರ್ಯದರ್ಶಿ ಗುರುಪಾದಸ್ವಾಮಿ, ಕಾಂಗ್ರೆಸ್ ಮುಖಂಡ ಡಿ.ರವಿಶಂಕರ್, ಪುರಸಭೆ ಅಧ್ಯಕ್ಷ ಕೋಳಿಪ್ರಕಾಶ್, ಮಾಜಿ ಅಧ್ಯಕ್ಷೆ ಗೀತಾಮಹೇಶ್, ಸದಸ್ಯ ನಟರಾಜು, ತಾ.ಪಂ. ಮಾಜಿ ಅಧ್ಯಕ್ಷ ಹಾಡ್ಯಮಹದೇವಸ್ವಾಮಿ, ಮುಖಂಡರಾದ ಸಿ.ಪಿ.ರಮೇಶ್, ಕಲ್ಲಹಳ್ಳಿ ಶ್ರೀನಿವಾಸ್, ಜೆ.ಶಿವಣ್ಣ, ತಿಮ್ಮಶೆಟ್ಟಿ, ಕೆ.ಬಿ.ನಟರಾಜು, ಮಲ್ಲಿಕಾರ್ಜುನ, ಚೌಕಹಳ್ಳಿಶೇಖರ್, ಕೆ.ಎನ್.ಪ್ರಸನ್ನ, ಉಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ವಕ್ತಾರ ಸೈಯದ್‌ಜಾಬೀರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು  ಹಾಜರಿದ್ದರು.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago