News Karnataka Kannada
Monday, April 29 2024
ಮೈಸೂರು

ಮೈಸೂರಿನಲ್ಲಿ ಸಾಂಪ್ರದಾಯಿಕ ಮತಗಟ್ಟೆ ನಿರ್ಮಾಣ

Construction of a traditional polling booth in Mysuru
Photo Credit : By Author

ಮೈಸೂರು: ಕಳೆದ ಕೆಲವು ವರ್ಷಗಳಿಂದ ಚುನಾವಣಾ ಆಯೋಗ ಕೂಡ ಮತದಾರರನ್ನು ಸೆಳೆಯುವ ಸಲುವಾಗಿ ಅದರಲ್ಲೂ ಗ್ರಾಮೀಣ ಪ್ರದೇಶದ ಹಿಂದುಳಿದ ಪ್ರದೇಶದಲ್ಲಿರುವ ಹಾಡಿಗಳಲ್ಲಿ ವಾಸಿಸುವ ಮತದಾರರನ್ನು ಮತಕೇಂದ್ರಕ್ಕೆ ಬರುವಂತೆ ಮಾಡಲು ಮತಗಟ್ಟೆಗಳನ್ನು ವಿಭಿನ್ನವಾಗಿ ನಿರ್ಮಿಸುವ ಕಾರ್ಯವನ್ನು ಮಾಡಲಾಗುತ್ತಿದೆ.

ಇದೀಗ ಮೈಸೂರು ಜಿಲ್ಲೆಯ ಹಿಂದುಳಿದ ತಾಲೂಕು ಎಂದೇ ಹೇಳಲಾಗುತ್ತಿರುವ ಹೆಚ್.ಡಿ.ಕೋಟೆಯಲ್ಲಿ ಬುಡಕಟ್ಟು ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಹಾಡಿಗಳಲ್ಲಿ ವಿಭಿನ್ನ ರೀತಿಯ ಮತಗಟ್ಟೆಗಳನ್ನು ಸೃಷ್ಟಿ ಮಾಡಲಾಗಿದ್ದು, ಅವು ಮತದಾರರನ್ನು ಸ್ವಾಗತಿಸಲು ಸಿದ್ಧಗೊಳ್ಳುತ್ತಿವೆ.

ಚುನಾವಣಾ ಆಯೋಗ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ (ಸ್ವೀಪ್) ಕಾರ್ಯಕ್ರಮದ ಅಡಿಯಲ್ಲಿ ಹೆಚ್.ಡಿ.ಕೋಟೆ ತಾಲೂಕಿನ ಬಸವನಗಿರಿ ಹಾಡಿಯ ಸರ್ಕಾರಿ ಬುಡಕಟ್ಟು ಆಶ್ರಮ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 57ನ್ನು ಸುಂದರವಾಗಿ ಸಾಂಪ್ರದಾಯಿಕವಾಗಿ ಆಕರ್ಷಣೀಯವಾಗಿ ತಯಾರು ಮಾಡಲಾಗಿದೆ. ಸಾಂಪ್ರದಾಯಿಕ ಸ್ವಾಗತ ಕಮಾನು ಎಲ್ಲರನ್ನು ಆಕರ್ಷಿಸುತ್ತಿದೆ. ಇದೇ ರೀತಿಯ ವಿಭಿನ್ನ ಮತ್ತು ವಿಶಿಷ್ಟವಾದ ಆಕರ್ಷಕ ಮತಗಟ್ಟೆಗಳನ್ನು ರಾಜ್ಯದಾದ್ಯಂತ ನಿರ್ಮಾಣ ಮಾಡಲಾಗುತ್ತಿದೆ.

ಕೇಂದ್ರ ಚುನಾವಣಾ ಆಯೋಗವು ಮತದಾನ ದಿನವನ್ನು ಹಬ್ಬದ ರೀತಿಯಲ್ಲಿ ಸಂಭ್ರಮದಿಂದ ಆಚರಿಸಲು ಕರೆ ನೀಡಿದ್ದು, ಅದರಂತೆ ಹಬ್ಬದ ವಾತಾವರಣವನ್ನು ಸೃಷ್ಟಿಮಾಡುವ ಕೆಲಸವನ್ನು ಮೈಸೂರು ಜಿಲ್ಲಾ ಸ್ವೀಪ್ ಸಮಿತಿಯು ಮಾಡುತ್ತಿದೆ. ಬಸವನಹಾಡಿಯಲ್ಲಿ ವಾಸಿಸುವ ಮತದಾರರ ಪೈಕಿ ಕೆಲವರು ಅನಕ್ಷರಸ್ಥರಾಗಿದ್ದು ಅವರಲ್ಲಿ ಮತದಾನ ಅರಿವು ಮೂಡಿಸಿ ಮತಗಟ್ಟೆಯತ್ತ ಕರೆತರುವ ಸಲುವಾಗಿ ಇದೀಗ ನಿರ್ಮಾಣ ಮಾಡಿರುವ ಮತಗಟ್ಟೆಯು ಬುಡಕಟ್ಟು ಸಾಂಪ್ರದಾಯಿಕ ಕಲೆ, ಸಂಸ್ಕೃತಿ, ವೈಭವವನ್ನು ಮೆರೆಯುತ್ತಿದ್ದು, ಎಲ್ಲರ ಗಮನಸೆಳೆಯುತ್ತಿದೆ.

ರಾಜ್ಯದಲ್ಲಿ ಐದು ವರ್ಷಗಳ ಬಳಿಕ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಅಧಿಕಾರ ಉಳಿಸಿಕೊಳ್ಳಲು ಮತ್ತು ಅಧಿಕಾರ ಪಡೆಯಲು ಪಕ್ಷಗಳು ಹೋರಾಟ ನಡೆಸುತ್ತಿದ್ದರೆ, ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಗೆಲುವಿಗಾಗಿ ಮತದಾರರ ಮನೆಬಾಗಿಲು ತಟ್ಟುತ್ತಾ ಮತ ನೀಡುವಂತೆ ಮತದಾರರ ಮನವೊಲಿಸುತ್ತಿದ್ದಾರೆ. ಇದೆಲ್ಲದರ ನಡುವೆ ಚುನಾವಣಾ ಆಯೋಗ ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದು, ಮತದಾರರನ್ನು ಮತಕೇಂದ್ರದತ್ತ ಆಕರ್ಷಿಸುವ ಕಾರ್ಯಕ್ಕೆ ಮುಂದಾಗಿದೆ.

ಪ್ರತಿ ಚುನಾವಣೆ ಬಂದಾಗಲೂ ಹೊಸ ಮತದಾರರು ಸೇರ್ಪಡೆಯಾಗುತ್ತಾರೆ. ಅದರಲ್ಲೂ ಈ ಬಾರಿ ರಾಜ್ಯದಲ್ಲಿ ಸುಮಾರು ಇಪ್ಪತ್ತು ಲಕ್ಷ ಮತದಾರರು ಮತಚಲಾಯಿಸಲಿದ್ದಾರೆ. ಹೊಸ ಮತದಾರರಿಗೆ ಮತಚಲಾಯಿಸುವುದು ಹೊಸ ಅನುಭವವಾಗಿದೆ. ಜತೆಗೆ ಮತದಾನ ಏಕೆ ಮಾಡಬೇಕು? ಪ್ರಜಾಪ್ರಭುತ್ವದಲ್ಲಿ ಮತಕ್ಕೆ ಎಷ್ಟು ಪ್ರಾಮುಖ್ಯತೆಯಿದೆ? ಎಂಬುದರ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಈಗಾಗಲೇ ಚುನಾವಣಾ ಆಯೋಗ ರಾಜ್ಯದಾದ್ಯಂತ ಮಾಡಿದ್ದು, ಪ್ರತಿಯೊಬ್ಬರೂ ಚುನಾವಣೆಯನ್ನು ಹಬ್ಬದಂತೆ ಸಂಭ್ರಮಿಸುವಂತೆ ಮನವಿ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು