Bengaluru 27°C
Ad

ಕಲುಷಿತ ನೀರಿನ ಪ್ರಕರಣ: ಜಿಲ್ಲಾ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ಅಮಾನತು ಮಾಡುವಂತೆ ಕೆಆರ್ ಎಸ್ ಪಕ್ಷ ಆಗ್ರಹ

ಮೈಸೂರು ಜಿಲ್ಲೆಯಲ್ಲಿ ಗ್ರಾಮೀಣ ಆರೋಗ್ಯ ಕಾರ್ಯಕ್ರಮವನ್ನು ಸರಿಯಾಗಿ ಕಾರ್ಯ ನಿರ್ವಹಿಸದೆ ನಿರ್ಲಕ್ಷ್ಯಮಾಡಿ, ಪರೋಕ್ಷವಾಗಿ ಜನಸಾಮಾನ್ಯರ ಸಾವಿಗೆ ಕಾರಣವಾಗಿರುವ ಜಿಲ್ಲಾ ಆರೋಗ್ಯ ಅಧಿಕಾರಿ, ಮೈಸೂರು ಮತ್ತು ನಂಜನಗೂಡು ತಾಲ್ಲೂಕು ಆರೋಗ್ಯ ಅಧಿಕಾರಿಗಳನ್ನು ಈ ಕೂಡಲೇ ಅಮಾನತು ಮಾಡಬೇಕು ಎಂದು ಕೆಆರ್ ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ವಕೀಲ ಎಂ. ರವಿಕುಮಾರ್ ಆಗ್ರಹಿಸಿದ್ದಾರೆ.

ನಂಜನಗೂಡು: ಮೈಸೂರು ಜಿಲ್ಲೆಯಲ್ಲಿ ಗ್ರಾಮೀಣ ಆರೋಗ್ಯ ಕಾರ್ಯಕ್ರಮವನ್ನು ಸರಿಯಾಗಿ ಕಾರ್ಯ ನಿರ್ವಹಿಸದೆ ನಿರ್ಲಕ್ಷ್ಯಮಾಡಿ, ಪರೋಕ್ಷವಾಗಿ ಜನಸಾಮಾನ್ಯರ ಸಾವಿಗೆ ಕಾರಣವಾಗಿರುವ ಜಿಲ್ಲಾ ಆರೋಗ್ಯ ಅಧಿಕಾರಿ, ಮೈಸೂರು ಮತ್ತು ನಂಜನಗೂಡು ತಾಲ್ಲೂಕು ಆರೋಗ್ಯ ಅಧಿಕಾರಿಗಳನ್ನು ಈ ಕೂಡಲೇ ಅಮಾನತು ಮಾಡಬೇಕು ಎಂದು ಕೆಆರ್ ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ವಕೀಲ ಎಂ. ರವಿಕುಮಾರ್ ಆಗ್ರಹಿಸಿದ್ದಾರೆ.

ನಂಜನಗೂಡು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಬೇಕು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಾಜೀನಾಮೆ ನೀಡಬೇಕು. ಮೈಸೂರು ತಾಲ್ಲೂಕಿನ ಕೆ.ಸಾಲುಂಡಿ ಗ್ರಾಮದಲ್ಲಿ 40ಕ್ಕೂ ಹೆಚ್ಚು ಜನರು ಕಲುಷಿತ ನೀರು ಸೇವಿಸಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.

ಒಬ್ಬ ಬಡ ಯುವಕ ನೀರನ್ನು ಕುಡಿದು ಸಾವನ್ನಪ್ಪಿದ್ದಾನೆ. ಹಾಗೂ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ  114ಕ್ಕೂ ಹೆಚ್ಚು ಸಾರ್ವಜನಿಕರು ಕಲುಷಿತ ನೀರನ್ನು ಕುಡಿದು ವಾಂತಿ ಭೇದಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಯೋಗ್ಯ ಅಧಿಕಾರಿಗಳನ್ನು ನೇಮಿಸಿಕೊಂಡಿರುವ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಗ್ರಾಮೀಣ ಪ್ರದೇಶದಲ್ಲಿ ಸರಿಯಾಗಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡದೆ ಮತ್ತು ನೀರನ್ನು ಸಂಗ್ರಹಿಸುವ ಟ್ಯಾಂಕರ್ ಗಳನ್ನು ಸ್ವಚ್ಛಗೊಳಿಸದೆ ಕಲುಷಿತ ನೀರನ್ನು ಜನರಿಗೆ ಕುಡಿಯಲು ಸರಬರಾಜು ಮಾಡಿರುವುದರಿಂದ ಈ ಅನಾಹುತಗಳು ಇದಕ್ಕೆ ಮೂಲ ಕಾರಣವಾಗಿದೆ.

ಮೈಸೂರು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಕುಮಾರಸ್ವಾಮಿ ಗ್ರಾಮೀಣ ಆರೋಗ್ಯ ಕಾರ್ಯಕ್ರಮದ ಬಗ್ಗೆ ಅಸಡ್ಡೆ ತೋರಿಸುವುದು ಮತ್ತು ಸ್ಥಳೀಯ ಅಧಿಕಾರಿಗಳ ಕಾರ್ಯವೈಖರಿಯನ್ನ ಮೇಲ್ವಿಚಾರಣೆ ಮಾಡದೇ ಕಛೇರಿಯಲ್ಲೇ ಕುಳಿತು ಸರ್ಕಾರದ ಸವಲತ್ತುಗಳನ್ನು ಅನುಭವಿಸುತ್ತಾ ಇರುವುದು.

ತಾಲ್ಲೂಕು ಆರೋಗ್ಯ ಅಧಿಕಾರಿಗಳು ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದೆ ಗ್ರಾಮೀಣ ಪ್ರದೇಶಗಳಿಗೆ ಹೋಗಿ ಮೇಲ್ವಿಚಾರಣೆ ಮಾಡದೇ ಇರುವುದೇ ಕಾರಣವಾಗಿದೆ. ಆದ್ದರಿಂದ ನಿಷ್ಪಕ್ಷವಾದ ತನಿಖೆ ಮಾಡಬೇಕು. ತಕ್ಷಣವೇ ಜಿಲ್ಲಾ ಆರೋಗ್ಯ ಅಧಿಕಾರಿ  ಡಾ.ಕುಮಾರಸ್ವಾಮಿಯವರನ್ನ ಕರ್ತವ್ಯದಿಂದ ಅಮಾನತು ಮಾಡಬೇಕು.

ಈ ದುರ್ಘಟನೆ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಮಳೆಗಾಲದಲ್ಲಿ ಇದು ಸರ್ವೇಸಾಮಾನ್ಯ ಇಂತಹ ಸಾವು ನೋವುಗಳು ಆಗುತ್ತವೆ ಎಂಬ ಮಾತಿನಲ್ಲಿ ಹೇಳಿರುವುದು ಆತನ ದುರಾಂಕಾರಿ ವರ್ತನೆಯಾಗಿದ್ದು, ಆತನು ಆ ಹುದ್ದೆಯಲ್ಲಿ ಹೊಂದಿರುದಕ್ಕೆ ಲಾಯಕ್ ಇಲ್ಲದ ಅಯೋಗ್ಯ ಎಂದು ಕಿಡಿಕಾರಿದ್ದಾರೆ.

ಜನಸಾಮಾನ್ಯರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿರುವ ಈತನ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಗ್ರಾಮ ಪಂಚಾಯತಿಯ ಪಿಡಿಒ ಕೂಡ ಇದಕ್ಕೆ ನೇರ ಹೊಣೆಯಾಗಿದ್ದಾರೆ ಅವರನ್ನು ಕೂಡ ಸೇವೆಯಿಂದ ಅಮಾನತು ಪಡಿಸಬೇಕು. ಸಾವಿಗಿಡಾಗಿರುವ ಕನಕರಾಜು ಕುಟುಂಬಕ್ಕೆ 50 ಲಕ್ಷ ಪರಿಹಾರವನ್ನು ಕೂಡಲೇ ಕೊಡಬೇಕು.

ಆತನ ಸಾವಿಗೆ ಕಾರಣವಾಗಿರುವ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು. ಒಂದು ವೇಳೆ ಇದನ್ನು ನಿರ್ಲಕ್ಷ್ಯ ಮಾಡಿದ್ದಲ್ಲಿ, ಜಿಲ್ಲಾಧಿಕಾರಿಗಳೇ ಇದರ ಹೊಣೆಯನ್ನು ಹೊರಬೇಕಾಗುತ್ತದೆ. ಮೈಸೂರು ಮತ್ತು ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಇಲ್ಲದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಮತ್ತು ಉಸ್ತುವಾರಿ ಸಚಿವರ ಕಛೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಜಿಲ್ಲಾ ಆಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.

Ad
Ad
Nk Channel Final 21 09 2023
Ad