ನಂಜನಗೂಡು: ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿಂಗೇಗೌಡ ಎಂಬುವವರು ಜಾನುವಾರುಗಳನ್ನು ಮೇಯಿಸುತ್ತಿದ್ದ ವೇಳೆ ಏಕಾಏಕಿ ಚಿರತೆಯೊಂದು ಹಸುವಿನ ಮೇಲೆ ದಾಳಿ ನಡೆಸಿ ಕೊಂದು ತಿಂದಿದೆ. ಅದೃಷ್ಟವಶಾತ್ ರೈತ ನಿಂಗೇಗೌಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಳೆದ ತಿಂಗಳಿಂದಷ್ಟೇ ನಿಂಗೇಗೌಡ ರವರಿಗೆ ಸೇರಿದ ಕರುವೊಂದನ್ನು ಚಿರತೆ ಬಲಿಪಡೆದಿತ್ತು. ಮತ್ತೆ ಹಸುವಿನ ಮೇಲೆ ದಾಳಿ ನಡೆಸಲಾಗಿದ್ದು ರೈತರು ಜಮೀನುಗಳಿಗೆ ತೆರಳಲು ಭಯಪಡುವಂತಾಗಿದೆ.
ಈ ಭಾಗದಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದ್ದು, ಬೋನು ಇಟ್ಟು ಚಿರತೆಯನ್ನು ಸೆರೆ ಹಿಡಿಯಬೇಕು. ರೈತನಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

