ಮೈಸೂರು : ಪುಟ್ಟ ಕರುವಿಗೆ ತೊಟ್ಟಿಲು ಶಾಸ್ತ್ರ ವನ್ನು ಮೈಸೂರಿನ ಶಾರದಾ ವಿಲಾಸ ಕಾಲೇಜಿನ ಹಿಂಭಾಗದ ಕೆ ಆರ್ ವನಂ ಮನೆಯಲ್ಲಿ ಮಾಡಿದ್ದಾರೆ.
ಪುಂಗನೂರು ಎಂಬ ಆಂಧ್ರ ಪ್ರದೇಶ ಮೂಲದ ದೇಸಿ ಹಸುಗಳನ್ನು ಕುಟುಂಬ ಸಾಕುತ್ತಿದೆ. ಮಧುಸೂದನ ತಾತಾಚಾರ್ಯ ಮತ್ತು ಕುಟುಂಬದವರು ಮೂರು ಹಸು ಮತ್ತು ಎರಡು ಕರುಗಳನ್ನು ಮನೆಯ ಕಾರ್ ಶೆಡ್ನಲ್ಲಿ ಕುಟುಂಬ ಸಾಕುತ್ತಿದೆ.
ಸಿರಿ, ನಿಧಿ, ಸಿಹಿ ಎಂಬ ಹಸುಗಳು ಮತ್ತು ಸಿರಿಯ ಮಗಳಾದ ಭುವಿ ಮತ್ತು ನಿಧಿಯ ಮಗಳಾದ ಸ್ವಾತಿ ಎಂಬ ಕರುಗಳನ್ನು ಕುಟುಂಬ ಸಾಕುತ್ತಿದ್ದು, ಇತ್ತೀಚೆಗಷ್ಟೇ ಎರಡೂ ಕರುಗಳಿಗೆ ತೊಟ್ಟಿಲು ಶಾಸ್ತ್ರವನ್ನು ಕುಟುಂಬ ನೆರವೇರಿಸಿದೆ. ಮಕ್ಕಳಂತೆ, ಮನೆಯ ಸದಸ್ಯರಂತೆ ಹಸುಗಳನ್ನು ಸಾಕುವ ವಿಶಿಷ್ಟ ಸಂಸ್ಕೃತಿಯು ನಮ್ಮ ದೇಶದಲ್ಲಿದೆ.
ಅದರಂತೆ ನಾವು ಮನೆಯ ಮಕ್ಕಳಂತೆ ಹಸುಗಳನ್ನು ನೋಡಿಕೊಳ್ಳುತ್ತಾ, ಮಾತೃ ಸ್ವರೂಪವಾದ, ಮುಕ್ಕೋಟಿ ದೇವತೆಗಳು ವಾಸಸ್ಥಾನವಾದ ಗೋವುಗಳ ಸೇವೆಯನ್ನು ಮಾಡಿಕೊಂಡು ಬಂದಿದ್ದೇವೆ. ಎಂದು ಕುಟುಂಬಸ್ಥರು ಸಂತಸ ಹಂಚಿಕೊಂಡರು.

