Categories: ಮೈಸೂರು

ಮೈಸೂರು: ಸಿದ್ದರಾಮಯ್ಯ ಪರ ಸೊಸೆ ಸ್ಮಿತಾ ರಾಕೇಶ್‌ ಪ್ರಚಾರ

ಮೈಸೂರು: ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸೋಮಣ್ಣ ಪರ ಚುನಾವಣಾ ಪ್ರಚಾರ ಜೋರಾಗಿದೆ. ಸಿದ್ದರಾಮಯ್ಯ ಅವರ ಸೊಸೆ ಸ್ಮಿತಾ ರಾಕೇಶ್ ಅವರು ಇದೇ ಮೊದಲ ಬಾರಿಗೆ ಮಾವನ ಪರ ಪ್ರಚಾರಕ್ಕೆ ಆಗಮಿಸಿ ವರುಣಾದ ಹಳ್ಳಿಗಳಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಕಳೆದ 15 ವರ್ಷಗಳಿಂದ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆಯಾಗುತ್ತಿದ್ದಾರೆ. ಸಿದ್ದರಾಮಯ್ಯ ಎರಡು ಬಾರಿ ವರುಣಾ ಕ್ಷೇತ್ರದಿಂದ ಆಯ್ಕೆಯಾದರು, ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿ ಮತ್ತು ವರುಣಾದಲ್ಲಿ ಆಯ್ಕೆಯಾದ ನಂತರ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದರು. ಕಳೆದ ಬಾರಿ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಆಯ್ಕೆಯಾಗಿ ಶಾಸಕರಾಗಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಯತೀಂದ್ರ ಮತ್ತೆ ವರುಣಾ ಕ್ಷೇತ್ರವನ್ನು ತಂದೆಗೆ ಬಿಟ್ಟುಕೊಟ್ಟಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ 16 ಗ್ರಾಮಗಳಲ್ಲಿ ಒಂದು ದಿನ ಪ್ರಚಾರ ನಡೆಸಿದ್ದು, ಇನ್ನೆರಡು ದಿನ ಬರುತ್ತೇನೆ ಎಂದಿದ್ದಾರೆ. ಆದರೆ ಬಿಜೆಪಿ ಅಭ್ಯರ್ಥಿ ಹಾಗೂ ಸಚಿವ ವಿ.ಸೋಮಣ್ಣ ಬಿರುಸಿನ ಪ್ರಚಾರ ನಡೆಸುತ್ತಿದ್ದು, ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಕ್ಷೇತ್ರದತ್ತ ಹೆಚ್ಚಿನ ಗಮನ ಹರಿಸಿದ್ದಾರೆ.

ಇದುವರೆಗೂ ಸಿದ್ದರಾಮಯ್ಯ ಕುಟುಂಬದಲ್ಲಿರುವ ಪುತ್ರರನ್ನು ಬಿಟ್ಟರೆ ಸಿದ್ದು ಪತ್ನಿ, ಸೊಸೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರಲಿಲ್ಲ. ಇದೇ ಪ್ರಥಮ ಬಾರಿಗೆ ವರುಣಾ ಕ್ಷೇತ್ರದ ತಾಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮಾವನ ಪರವಾಗಿ ರಾಕೇಶ್ ಸಿದ್ದರಾಮಯ್ಯ ಪತ್ನಿ ಸ್ಮಿತಾ ರಾಕೇಶ್ ಮನೆ ಮನೆಗೆ ತೆರಳಿ ಕಾಂಗ್ರೆಸ್ ಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ. ಮಾವ ಮತ್ತೆ ಸಿಎಂ ಆಗಲಿದ್ದು, ಕಾಂಗ್ರೆಸ್‌ಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ. ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ ವೇಳೆ ರಾಕೇಶ್ ಸಿದ್ದರಾಮಯ್ಯ ಅವರ ಪುತ್ರ 17 ವರ್ಷದ ಧವನ್ ರಾಕೇಶ್ ಅವರನ್ನು ಮಾಜಿ ಸಿಎಂ ಸಿಎಂ ಜನರಿಗೆ ಪರಿಚಯಿಸಿದ್ದು, ತಂದೆ (ರಾಕೇಶ್‌) ಉತ್ತರಾಧಿಕಾರಿಯಾಗಿ ರಾಜಕೀಯ ಕ್ಷೇತ್ರದಲ್ಲಿ ಮುಂದುವರಿಯುತ್ತಾನೆ ಎಂದುತ ತಿಳಿಸಿದ್ದರು.
ಈ ಬಾರಿ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ವಿ.ಸೋಮಣ್ಣ ಅವರು ಪ್ರತಿ ಗ್ರಾಮಕ್ಕೆ ಮೆರವಣಿಗೆ ಮೂಲಕ ತೆರಳಿ ಮತ ಯಾಚನೆ ಮಾಡುತ್ತಿದ್ದಾರೆ. ಬಿಜೆಪಿ ಪ್ರಥಮ ಬಾರಿಗೆ ವರುಣಾ ಕ್ಷೇತ್ರದಲ್ಲಿ ಶತಾಯಗತಾಯ ಗೆಲ್ಲಬೇಕೆಂದು ತಂತ್ರ ಹೂಡಿದೆ.

Umesha HS

Recent Posts

ಐಪಿಎಲ್‌ ಬೆಟ್ಟಿಂಗ್‌: ಲಕ್ಷ ಲಕ್ಷ ಹಣ ಕಳೆದುಕೊಂಡು ನೇಣಿಗೆ ಶರಣು

ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ…

1 min ago

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

13 mins ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

29 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

42 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

1 hour ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

1 hour ago