ಮೈಸೂರು : ಕೆ.ಆರ್. ಆಸ್ಪತ್ರೆಗೆ ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ ಭೇಟಿನೀಡಿ ಪರಿಶೀಲನೆ ನಡೆಸಿದರು.ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಸೌಜನ್ಯವಾಗಿ ವರ್ತಿಸಬೇಕು ಎಂದು ಸೂಚನೆ ನೀಡಲಾಯಿತು.
ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ ಮೂರನೇ ದಿನದ ನಗರ ಸಂಚಾರ ನಡೆಸಿದ್ದು, K.R ಆಸ್ಪತ್ರೆಯ ಪ್ರತಿ ವಾರ್ಡ್ ಗಳಿಗೆ ತೆರಳಿ ಸರಿಯಾಗಿ ಚಿಕಿತ್ಸೆ ದೊರೆಯುತ್ತಿದೆಯೇ, ಶೌಚಾಲಯ, ಊಟದ ವ್ಯವಸ್ಥೆ ಸರಿಯಾಗಿದೆಯೇ? ಎಂದು ರೋಗಿಗಳಿಂದ ಮಾಹಿತಿ. ಎಕ್ಸರೇ ಸ್ಕ್ಯಾನಿಂಗ್, ರಕ್ತ ಪರೀಕ್ಷೆ ವೈದ್ಯರ ಬಗ್ಗೆ ವಿಚಾರಿಸಿ, ಹಣಕ್ಕೆ ಬೇಡಿಕೆಯಿಡುವುದು, ಸ್ವಚ್ಛತೆಯ ಕೊರತೆ, ಮತ್ತು ಡಿ ಗ್ರೂಪ್ ಕೊರತೆ ಸೇರಿದಂತೆ ಹಲವು ಸಮಸ್ಯೆಗಳನ್ನು ಕೆ.ಎನ್. ಫಣೀಂದ್ರ ಗುರುತಿಸಿದರು.
ತಪಾಸಣೆ ಸಂದರ್ಭದಲ್ಲಿ ಆಸ್ಪತ್ರೆಯ ಒಳಗೆ ನಾಯಿ ಇರುವುದನ್ನು ಕಂಡು ಆಸ್ಪತ್ರೆಯ ಅಧಿಕಾರಿಗಳಿಗೆಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ ಪ್ರಶ್ನಿಸಿದರು. ಮೈಸೂರು ಮೆಡಿಕಲ್ ಕಾಲೇಜು ಡೀನ್ ಹಾಗೂ ನಿರ್ದೇಶಕರಾದ ದಾಕ್ಷಾಯಿಣಿ ಅವರನ್ನು ಪ್ರಶ್ನಿಸಿ ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ ಮಾಹಿತಿ ಪಡೆದರು.

