News Karnataka Kannada
Monday, April 22 2024
Cricket
ಮೈಸೂರು

ದೇವೇಗೌಡರು ನಾಯಕರನ್ನು ಬೆಳೆಸುತ್ತಾರೆ ಹೊರತು ತುಳಿಯುವುದಿಲ್ಲ: ಪ್ರತಾಪ್‌ ಸಿಂಹ

ದೇವೇಗೌಡರು ನಾಯಕರನ್ನು ಬೆಳೆಸುತ್ತಾರೆ ಹೊರತು ತುಳಿದು ಗೊತ್ತಿಲ್ಲ ಎಂದು ಸಂಸದ ಪ್ರತಾಪ್‌ ಸಿಂಹ ಸಚಿವ ವೆಂಕಟೇಶ್‌ಗೆ ತಿರುಗೇಟು ನೀಡಿದ್ದಾರೆ.
Photo Credit : NewsKarnataka

ಮೈಸೂರು: ದೇವೇಗೌಡರು ನಾಯಕರನ್ನು ಬೆಳೆಸುತ್ತಾರೆ ಹೊರತು ತುಳಿದು ಗೊತ್ತಿಲ್ಲ ಎಂದು ಸಂಸದ ಪ್ರತಾಪ್‌ ಸಿಂಹ ಸಚಿವ ವೆಂಕಟೇಶ್‌ಗೆ ತಿರುಗೇಟು ನೀಡಿದ್ದಾರೆ.

ದೇವೇಗೌಡರೇ ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ತಪ್ಪಿಸಿದ್ದಾರೆ ಎಂಬ ಸಚಿವ ಕೆ ವೆಂಕಟೇಶ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಅನ್ನ ತಿನ್ನುವ ಬಾಯಲ್ಲಿ ಏನೇನೋ ಮಾತನಾಡಬೇಡಿ. ನನಗೆ ಟಿಕೆಟ್ ಕೊಡಿಸಬೇಕು ಎಂದು ಅಮಿತ್ ಶಾ ಅವರ ಜೊತೆ ಫೋನಿನಲ್ಲಿ ದೇವೇಗೌಡರು ಮಾತನಾಡಿದ್ದರು ಎಂದು ಹೇಳಿದರು.

ಅಮಿತ್ ಶಾ ಅವರಲ್ಲಿ ನನಗೆ ಟಿಕೆಟ್ ಕೊಡಿ ಎಂದು ಕೇಳಿದವರಲ್ಲಿ ದೇವೇಗೌಡರು ಒಬ್ಬರು. ಇಂತಹ ವ್ಯಕ್ತಿ ನನಗೆ ಟಿಕೆಟ್ ತಪ್ಪಿಸುತ್ತಾರೆ ಅಂತ ಹೇಳಿದರೆ ಹೇಗೆ ಎಂದು ಪ್ರತಾಪ್‌ ಸಿಂಹ ಪ್ರಶ್ನಿಸಿದರು. ವೆಂಕಟೇಶ್ ಅವರು ಇಂತಹ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು. ಈ ಹೇಳಿಕೆಯಿಂದ ಅವರ ಮೇಲಿದ್ದ ಎಲ್ಲಾ ಗೌರವವು ಮರೆಯಾಗಿದೆ. ನಿಮ್ಮನ್ನು ರಾಜಕೀಯವಾಗಿ ಬೆಳೆಸಿ ಶಕ್ತಿ ತುಂಬಿದ್ದು ದೇವೇಗೌಡರು ಎಂಬುದನ್ನು ಮರೆಯಬೇಡಿ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು