Categories: ಮೈಸೂರು

ಕಲಾವಿದರ ಗುರುತಿಸಲು ಡಿಜಿಟಲ್ ಮಾಧ್ಯಮ ವೇದಿಕೆ: ದೀಪಿಕಾ ಪಾಂಡುರಂಗಿ

ಮೈಸೂರು: ಸರ್ಕಾರ ಸಂಗೀತ ಕಲಾವಿದರನ್ನ ಗುರುತಿಸಿ ಮುಖ್ಯವಾಹಿನಿಗೆ ತರಲು ಡಿಜಿಟಲ್ ಮಾಧ್ಯಮವನ್ನು ವೇದಿಕೆಗಳನ್ನಾಗಿ ಬಳಸಿಕೊಳ್ಳಬೇಕು ಎಂದು ಕಲಾವಿದೆ ವಿದೂಷಿ ದೀಪಿಕಾ ಪಾಂಡುರಂಗಿ ಹೇಳಿದ್ದಾರೆ.

ಮೈಸೂರಿನಲ್ಲಿ ವಿಶ್ವ ಸಂಗೀತ ದಿನಾಚರಣೆಯ ಅಂಗವಾಗಿ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿ  ಜೀವಧಾರ ರಕ್ತನಿಧಿ ಕೇಂದ್ರದ ಆವರಣದಲ್ಲಿ  ಕೆಎಂಪಿಕೆ ಟ್ರಸ್ಟ್ ವತಿಯಿಂದ “ಸಂಗೀತದಿಂದ ಆರೋಗ್ಯ” ವಿಚಾರಮಂಥನ ಕಾರ್ಯಕ್ರಮ ಹಾಗೂ ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದಿರುವ ಸಂಗೀತ ಕಲಾವಿದರಿಗೆ ಸಂಗೀತ ಕಲಾ ಸಾರಥಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, ಸಂಗೀತ ಬೆಳೆಯುವಲ್ಲಿ ಮೈಸೂರಿನ ಕಲಾವಿದರ ಪಾತ್ರ ಮಹತ್ವವಾದುದು, ಯೋಗ ದಿನಾಚರಣೆ ಮತ್ತು ಸಂಗೀತ ಎರಡು ಒಂದೇ ದಿನದಂದೇ ಆಚರಿಸುತ್ತೇವೆ, ಸರ್ಕಾರ ಸಂಗೀತ ಕಲಾವಿದರನ್ನ ಗುರುತಿಸಿ ಮುಖ್ಯವಾಹನಿಗೆ ತರಬೇಕು ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಇಳೈ ಆಳ್ವಾರ್ ಸ್ವಾಮೀಜಿ , ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್ , ಕನ್ನಡ ಸಾಹಿತ್ಯ ಪರಿಷತ್ ನ ನಿಕಟಪೂರ್ವ ಅಧ್ಯಕ್ಷ ವೈ ಡಿ ರಾಜಣ್ಣ , ಹಿರಿಯ ಸಮಾಜ ಸೇವಕರಾದ ಕೆ ರಘುರಾಂ ವಾಜಪೇಯಿ , ಲೇಖಕಿ ಶ್ವೇತಾ ಮಡಪ್ಪಾಡಿ , ಪ್ರಸಾದ್ ಸ್ಕೂಲ್ ಆಫ್ ರಿದಮ್ ಸಂಸ್ಥೆಯ ಮುಖ್ಯಸ್ಥರಾದ ರಾಘವೇಂದ್ರ ಪ್ರಸಾದ್, ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ,  ಪ್ರಧಾನ ಕಾರ್ಯದರ್ಶಿ  ಅಜಯ್ ಶಾಸ್ತ್ರಿ , ವಿನಯ್ ಕಣಗಾಲ್ , ಸುಚೀಂದ್ರ , ಚಕ್ರಪಾಣಿ , ನವೀನ್ ಕೆಂಪಿ,ನಾಗಶ್ರೀ ಸುಚೀಂದ್ರ ಇನ್ನಿತರರು ಇದ್ದರು.

Ashika S

Recent Posts

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

6 mins ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

22 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

35 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

57 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

1 hour ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

1 hour ago