ನಂಜನಗೂಡು: ವರುಣ ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರ 78ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಲಾಗುತ್ತಿದೆ.
ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿಗಳನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ ಬಸವರಾಜು ಮತ್ತು ತಗಡೂರು ಕಾಂಗ್ರೆಸ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಡ್ಯ ರಂಗಸ್ವಾಮಿ ವಿತರಿಸಿದರು.
ಬಳಿಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ ಬಸವರಾಜು ಮಾತನಾಡಿ, ಸುಮಾರು ವರ್ಷಗಳಿಂದ ಡಾ.ಯತೀಂದ್ರ ಸಿದ್ದರಾಮಯ್ಯ ರವರ ಅಭಿಮಾನಿಗಳ ಬಳಗದ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಿಕೊಂಡು ಬರುತ್ತಿರುವುದು ಸಂತಸ ತಂದಿದೆ. ಇದೇ ರೀತಿ ನಿಮ್ಮ ಸಾಮಾಜಿಕ ಕಾರ್ಯಗಳು ನಡೆಯಲಿ ಎಂದು ತಿಳಿಸಿದರು.
ನಂತರ ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಡ್ಯ ರಂಗಸ್ವಾಮಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದರು ಕೂಡ ಸರ್ಕಾರಿ ಶಾಲೆಗಳಿಗೆ ಪೋಷಕರು ತಮ್ಮ ಮಕ್ಕಳನ್ನು ದಾಖಲಾತಿ ಮಾಡುತ್ತಿಲ್ಲ. ಮಕ್ಕಳಿಗೆ ಸರ್ಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುತ್ತಿದೆ. ಇದರೊಟ್ಟಿಗೆ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಅಭಿಮಾನಿಗಳ ಬಳಗದಿಂದ ಇಂತಹ ಸಾಮಾಜಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಉನ್ನತ ಮಟ್ಟದಲ್ಲಿ ಇರುವವರು ಸರ್ಕಾರಿ ಶಾಲೆಯಲ್ಲಿಯೇ ಓದಿದವರು. ಹಾಗಾಗಿ ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ದಾಖಲಾತಿ ಮಾಡುವುದರ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸಬೇಕಿದೆ ಎಂದು ಹೇಳಿದರು.
ಶಾಲಾ ಮಕ್ಕಳಿಗೆ ಉಚಿತವಾಗಿ ಬ್ಯಾಗ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಡಾ.ಯತೀಂದ್ರ ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ಉಸ್ತುವಾರಿ ಬಿಳುಗಲಿ ಕುಮಾರ್ ರವರಿಗೆ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ ಬಸವರಾಜು, ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಮಾಜಿ ಗ್ರಾ.ಪಂ ಅಧ್ಯಕ್ಷೆ ಚಂದ್ರವತಿ ಬಸವರಾಜ್, ಗ್ರಾಪಂ ಉಪಾಧ್ಯಕ್ಷ ಗುರು ಮಲ್ಲೇಶ್, ಗ್ರಾಪಂ ಸದಸ್ಯರಾದ ಮಾದಶೆಟ್ಟಿ, ಮುದ್ದುಮಾದಶೆಟ್ಟಿ, ಸುರೇಶ್, ತಗಡೂರು ಕಾಂಗ್ರೆಸ್ ಅಧ್ಯಕ್ಷ ಶಿವರಾಂ, ಸಮಾಜ ಸೇವಕ ಹಾಗೂ ಕಾಂಗ್ರೆಸ್ ಯುವ ಮುಖಂಡ ಗಾರ್ಡನ್ ಮಹೇಶ್, ಮುಖ್ಯ ಶಿಕ್ಷಕ ಸದಾಶಿವ, ಮುಖಂಡರಾದ ಆರ್ ಮಹದೇವ್, ಬಸವಣ್ಣ, ನಾರಾಯಣ ನಾಯಕ, ಕಾಂತರಾಜ್, ಗುರು ಸಿದ್ದೇಗೌಡ, ರಾಜು, ಮೂಡಹಳ್ಳಿ ಮಹದೇವಸ್ವಾಮಿ ಸೇರಿದಂತೆ ಹಲವರು ಭಾಗವಹಿಸಿದ್ದರು.

