Bengaluru 24°C
Ad

ಪ್ರಜ್ವಲ್ ಪ್ರಕರಣ ಡೈವರ್ಟ್ ಮಾಡಲು ಡಿಕೆಶಿ ಮೇಲೆ ಆರೋಪ: ಸಿಎಂ ಸಿದ್ದರಾಮಯ್ಯ

ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್‌ ಡ್ರೈವ್ ಪ್ರಕರಣದಲ್ಲಿನ ಗಂಭೀರ ಆರೋಪಗಳನ್ನು ಡೈವರ್ಟ್ ಮಾಡುವ ಸಲುವಾಗಿ ಕುಮಾರಸ್ವಾಮಿ  ಅವರು ಡಿ.ಕೆ.ಶಿವಕುಮಾರ್ ಅವರ ಹೆಸರು ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರು: ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್‌ ಡ್ರೈವ್ ಪ್ರಕರಣದಲ್ಲಿನ ಗಂಭೀರ ಆರೋಪಗಳನ್ನು ಡೈವರ್ಟ್ ಮಾಡುವ ಸಲುವಾಗಿ ಕುಮಾರಸ್ವಾಮಿ ಅವರು ಡಿ.ಕೆ.ಶಿವಕುಮಾರ್ ಅವರ ಹೆಸರು ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ತಮ್ಮ ನಿವಾಸದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್  ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ವಿರುದ್ಧ ರೇಪ್, ಲೈಂಗಿಕ ಕಿರುಕುಳ ಆರೋಪಿಗಳಿವೆ. ಈ ಎಲ್ಲ ವಿಚಾರಗಳನ್ನು ಡೈವರ್ಟ್ ಮಾಡಲು ಕುಮಾರಸ್ವಾಮಿ ಅವರು ಡಿ.ಕೆ.ಶಿವಕುಮಾರ್ ಹೆಸರು ಹೇಳುತ್ತಿದ್ದಾರೆ ಎಂದು ಡಿಸಿಎಂ ಡಿಕೆಶಿ ಪರವಾಗಿ ಬ್ಯಾಟ್ ಬೀಸುವ ಮೂಲಕ ಪೆನ್‌ ಡ್ರೈವ್ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆಗೊಳಪಡಿಸಿ ಎಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ಅಪರಾಧಿ ಅಲ್ಲ, ಆರೋಪಿ ಎಂದು ಹೇಳಿದ್ದಾರೆ. ನಾನೂ ಅದನ್ನೇ ಹೇಳುತ್ತಿದ್ದೇನೆ, ನಾನು ಸಹ ಆತ  ಆರೋಪಿ ಎಂದೇ ಹೇಳುತ್ತಿದ್ದೇನೆ. ದೇವೇಗೌಡರು ಹಾಗೂ ಅವರ ಮನೆಯವರಿಗೆ ಗೊತ್ತಿಲ್ಲದೇ ಪ್ರಜ್ವಲ್ ಮನೆಯಿಂದ ಹೋಗಿದ್ದಾನಾ? ಪ್ರಜ್ವಲ್ ಅವರ ಕುಟುಂಬದವರೊಂದಿಗೆ ಆತ ಸಂಪರ್ಕದಲ್ಲಿ ಇಲ್ಲವೇ?, ಈ ಹಿಂದೆ ಪ್ರಜ್ವಲ್ ಪರ ವಿಚಾರಕ್ಕೆ ಹೋದಾಗ ನನ್ನ ಮಗ ಎಂದಿದ್ದರು. ಆ ಹೇಳಿಕೆ ಅವರ ಸಂಪರ್ಕದಲ್ಲಿದ್ದಂತೆ ಅಲ್ಲವೇ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಪ್ರಜ್ವಲ್ ವಿಚಾರದ ಕುರಿತು ಅವರ ಕುಟುಂಬಕ್ಕೆ ಎಲ್ಲವೂ ಗೊತ್ತಿದೆ ಎಂದರು.

ಈ ನಡುವೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಿದ್ದ ಸಿದ್ದರಾಮಯ್ಯ ಶುಕ್ರವಾರ  ಬೆಳಗ್ಗೆ ನಜರ್‌ಬಾದ್‌ನಲ್ಲಿರುವ ಮೈಲಾರಿ ಹೋಟೆಲ್‌ನಲ್ಲಿ ಉಪಹಾರ ಸೇವಿಸಿದರು. ನಗರದ ನಜರ್‌ಬಾದ್ ಮುಖ್ಯರಸ್ತೆಯಲ್ಲಿರುವ ಓಲ್ಡ್ ಒರಿಜಿನಲ್ ವಿನಾಯಕ ಮೈಲಾರಿ ಹೋಟೆಲ್‌ಗೆ ತೆರಳಿದ ಸಿಎಂ ಸಿದ್ದರಾಮಯ್ಯ, ಬಿಸಿ ಬಿಸಿ ದೋಸೆ ಸವಿದರು. ಸಿದ್ದರಾಮಯ್ಯಗೆ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಮುಡಾ ಅಧ್ಯಕ್ಷ ಕೆ.ಮರಿಗೌಡ ಹಾಗೂ ಇನ್ನಿತರರು ಸಾಥ್ ನೀಡಿದರು.

ಮೈಸೂರು: ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್‌ ಡ್ರೈವ್ ಪ್ರಕರಣದಲ್ಲಿನ ಗಂಭೀರ ಆರೋಪಗಳನ್ನು ಡೈವರ್ಟ್ ಮಾಡುವ  ಸಲುವಾಗಿ ಕುಮಾರಸ್ವಾಮಿ ಅವರು ಡಿ.ಕೆ.ಶಿವಕುಮಾರ್ ಅವರ ಹೆಸರು ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ತಮ್ಮ ನಿವಾಸದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್  ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ವಿರುದ್ಧ ರೇಪ್, ಲೈಂಗಿಕ ಕಿರುಕುಳ ಆರೋಪಿಗಳಿವೆ. ಈ ಎಲ್ಲ ವಿಚಾರಗಳನ್ನು ಡೈವರ್ಟ್ ಮಾಡಲು ಕುಮಾರಸ್ವಾಮಿ ಅವರು ಡಿ.ಕೆ.ಶಿವಕುಮಾರ್ ಹೆಸರು ಹೇಳುತ್ತಿದ್ದಾರೆ ಎಂದು ಡಿಸಿಎಂ ಡಿಕೆಶಿ ಪರವಾಗಿ ಬ್ಯಾಟ್ ಬೀಸುವ ಮೂಲಕ ಪೆನ್‌ ಡ್ರೈವ್ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆಗೊಳಪಡಿಸಿ ಎಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ಅಪರಾಧಿ ಅಲ್ಲ, ಆರೋಪಿ ಎಂದು ಹೇಳಿದ್ದಾರೆ. ನಾನೂ ಅದನ್ನೇ ಹೇಳುತ್ತಿದ್ದೇನೆ, ನಾನು ಸಹ ಆತ  ಆರೋಪಿ ಎಂದೇ ಹೇಳುತ್ತಿದ್ದೇನೆ. ದೇವೇಗೌಡರು ಹಾಗೂ ಅವರ ಮನೆಯವರಿಗೆ ಗೊತ್ತಿಲ್ಲದೇ ಪ್ರಜ್ವಲ್ ಮನೆಯಿಂದ ಹೋಗಿದ್ದಾನಾ? ಪ್ರಜ್ವಲ್ ಅವರ ಕುಟುಂಬದವರೊಂದಿಗೆ ಆತ ಸಂಪರ್ಕದಲ್ಲಿ ಇಲ್ಲವೇ?, ಈ ಹಿಂದೆ ಪ್ರಜ್ವಲ್ ಪರ ವಿಚಾರಕ್ಕೆ ಹೋದಾಗ ನನ್ನ ಮಗ ಎಂದಿದ್ದರು. ಆ ಹೇಳಿಕೆ ಅವರ ಸಂಪರ್ಕದಲ್ಲಿದ್ದಂತೆ ಅಲ್ಲವೇ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಪ್ರಜ್ವಲ್ ವಿಚಾರದ ಕುರಿತು ಅವರ ಕುಟುಂಬಕ್ಕೆ ಎಲ್ಲವೂ ಗೊತ್ತಿದೆ ಎಂದರು.

Ad
Ad
Nk Channel Final 21 09 2023
Ad