Bengaluru 24°C
Ad

ಲಂಚಕ್ಕೆ ಕೈವೊಡ್ಡಿದ ವೈದ್ಯ: 4 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ

ವೈದ್ಯರೊಬ್ಬರು ಲಂಚಕ್ಕೆ ಬೇಡಿಕೆ ಇಟ್ಟ ಘಟನೆ ಮೈಸೂರಿನ ಕೆ.ಆರ್‌ ಆಸ್ಪತ್ರೆಯಲ್ಲಿ ನಡೆದಿದೆ. ಲಂಚಕ್ಕೆ ಕೈವೊಡ್ಡಿದ ವೈದ್ಯನಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಲಾಗಿದೆ.

ಮೈಸೂರು: ವೈದ್ಯರೊಬ್ಬರು ಲಂಚಕ್ಕೆ ಬೇಡಿಕೆ ಇಟ್ಟ ಘಟನೆ ಮೈಸೂರಿನ ಕೆ.ಆರ್‌ ಆಸ್ಪತ್ರೆಯಲ್ಲಿ ನಡೆದಿದೆ. ಲಂಚಕ್ಕೆ ಕೈವೊಡ್ಡಿದ ವೈದ್ಯನಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಲಾಗಿದೆ.

3ನೇ ಅಪರ ಜಿಲ್ಲಾ ಸತ್ರ ಮತ್ತು ಲೋಕಾಯುಕ್ತ ವಿಶೇಷ ನ್ಯಾಯಾಲಯ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಕೆ.ಆರ್. ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಕ ಡಾ.ಪುಟ್ಟಸ್ವಾಮಿ ಶಿಕ್ಷೆಗೊಳಗಾದ ವೈದ್ಯರಾಗಿದ್ದಾರೆ.

ಕಳೆದ 2017ರ ಏಪ್ರಿಲ್ 12ರಂದು ದೇವರಾಜು ಎಂಬುವವರು ದೂರು ನೀಡಿದ್ದರು. ಪುಟ್ಟಸ್ವಾಮಿ 26 ಸಾವಿರ ರೂ. ಲಂಚ ಸ್ವೀಕರಿಸುವಾಗ ಎಸಿಬಿ ಪೊಲೀಸಲಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದರು.

ಆರೋಪಿ ಪುಟ್ಟಸ್ವಾಮಿ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಡಾ ಪುಟ್ಟಸ್ವಾಮಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಲಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Ad
Ad
Nk Channel Final 21 09 2023
Ad