Bengaluru 28°C
Ad

ಪ್ಲಾಸ್ಟಿಕ್ ಮುಕ್ತ ಮೈಸೂರಿಗಾಗಿ ಮನೆ, ಮನೆಗೆ ಬಟ್ಟೆ ಬ್ಯಾಗ್ ವಿತರಣೆ

Mysore

ಮೈಸೂರು: ಅಂತರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತದಿನ ಅಂಗವಾಗಿ ಕೆಎಂಪಿಕೆ ಟ್ರಸ್ಟ್  ವತಿಯಿಂದ ನಗರದ ಚಾಮುಂಡಿಪುರಂನಲ್ಲಿ ಮನೆ ಮನೆಗೆ ತೆರಳಿ ಪ್ಲಾಸ್ಟಿಕ್ ಬ್ಯಾಕ್ ತ್ಯಜಿಸಿ ಬಟ್ಟೆ ಬ್ಯಾಗ್ ಬಳಿಸಿ ಘೋಷವಾಕ್ಯದೊಂದಿಗೆ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.

Ad
300x250 2

ಸಾಂಕೇತಿಕವಾಗಿ ಮನೆಗಳಿಗೆ ಬಟ್ಟೆ  ಬ್ಯಾಗ್ ನೀಡುವ ಮೂಲಕ  ಚಾಲನೆ ನೀಡಿ ಮಾತನಾಡಿದ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಆಷಾದ್ ಉರ್ ರೆಹಮಾನ್ ಶರೀಫ್ ರವರು  ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಬಳಕೆಯನ್ನು ಪ್ರತಿಯೊಬ್ಬರೂ ತ್ಯಜಿಸಬೇಕು. ಆ ಮೂಲಕ ಪ್ಲಾಸ್ಟಿಕ್‌ ಮುಕ್ತ ನಗರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

 ಪ್ಲಾಸ್ಟಿಕ್ ನಿಷೇಧ ಹಾಗೂ ಪರಿಸರ ರಕ್ಷಣೆ ಜವಾಬ್ದಾರಿ ಕೇವಲ ಸರ್ಕಾರ ಹಾಗೂ ಸ್ಥಳೀಯ ಆಡಳಿತದ್ದು ಎಂಬ ಮನೋಭಾವದಿಂದ ಹೊರಬರಬೇಕು. ಸಾರ್ವಜನಿಕರು ತಮ್ಮ ಹೊಣೆ ಅರಿತು ಪರಿಸರ ರಕ್ಷಣೆಗೆ ಮುಂದಾಗಬೇಕು. ಪ್ಲಾಸ್ಟಿಕ್ ಪರಿಸರಕ್ಕೆ ಮಾರಕ, ಭೂಮಿಯಲ್ಲಿ ಕೊಳೆಯದ ಇದು, ದಹಿಸಿದಾಗ ವಿಷಕಾರಕ ಅಂಶಗಳನ್ನು ಪರಿಸರಕ್ಕೆ ಬಿಡುಗಡೆ ಮಾಡುತ್ತದೆ. ಇದರಿಂದ ಕ್ಯಾನ್ಸ‌ರ್  ಸೇರಿ ಹಲವು ಮಾರಣಾಂತಿಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಪ್ರತಿಯೊಬ್ಬರು ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸುವ ಸಂಕಲ್ಪ ಮಾಡಬೇಕು ಎಂದರು.

ಪಾಲಿಕೆಯ ಆರೋಗ್ಯ ಅಧಿಕಾರಿ  ಡಾ.ವೆಂಕಟೇಶ್ ಮಾತನಾಡಿ ಪ್ಲಾಸ್ಟಿಕ್ ಬ್ಯಾಗ್ ಗಳು ಹಾಗು ವಸ್ತುಗಳನ್ನು ಬಳಸುವುದು ನಿಲ್ಲಿಸಿ ಸುಂದರ ಪರಿಸರ ನಿರ್ಮಿಸಿ. ದೈನಂದಿನ ಜೀವನದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸಿ ಬಟ್ಟೆ, ಕಾಗದ ಹಾಗೂ ಇತರ ಪರಿಸರ ಸ್ನೇಹಿ ಕೈಚೀಲ ಬಳಸಿ ಆ ಮೂಲಕ ಪ್ಲಾಸ್ಟಿಕ್ ನಿಂದ ಪರಿಸರವನ್ನು ದೂರವಿಡಿ  ಎಂದರಲ್ಲದೆ, ಮುಂದಿನ ಪೀಳಿಗೆಗೆ ಪ್ಲಾಸ್ಟಿಕ್ ಮುಕ್ತ ಪರಿಸರ ಕೊಡುಗೆಯಾಗಿ ನೀಡಲು ಇಂದೇ ಶಪಥ ಮಾಡಿ ನಿಮ್ಮ ಮನೆಯನ್ನು ಸಂಪೂರ್ಣ ಪ್ಲಾಸ್ಟಿಕ್ ಮುಕ್ತವಾಗಿ ಮಾಡಿ  ಇಂತಹ ಜಾಗೃತಿ ಕಾರ್ಯಕ್ರಮಗಳು ನಗರದಲ್ಲಿ ಹೆಚ್ಚೆಚ್ಚು ನಡೆಯಲಿ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕೆಎಂಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮುತ್ತಣ್ಣ, ಅಜಯ್ ಶಾಸ್ತ್ರಿ, ವಲಯ ಆಯುಕ್ತರಾದ ಮಂಜುನಾಥ್ ರೆಡ್ಡಿ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮೀನಾಕ್ಷಿ , ಮೈಸೂರು ಮಹಾನಗರಪಾಲಿಕೆ ಪರಿಸರ ಅಭಿಯಂತರಾದ ಜ್ಯೋತಿ, ಹಿರಿಯ ಆರೋಗ್ಯ ನಿರೀಕ್ಷಕರಾದ ಶಿವಪ್ರಸಾದ್ , ಕಿರಿಯ ಆರೋಗ್ಯ ನಿರೀಕ್ಷಕರಾದ ಪ್ರೀತಿ , ರೇಣುಕಾ ರಾಜ್, ವಿನಯ್ ಕಣಗಾಲ್, ಶ್ರೀಕಾಂತ್ ಕಶ್ಯಪ್, ಎಸ್ ಎನ್ ರಾಜೇಶ್, ಸುಚಿಂದ್ರ, ಸಚಿನ್ ನಾಯಕ್, ಟ್ರಸ್ಟ್ ಪದಾಧಿಕಾರಿಗಳು, ಪೌರಕಾರ್ಮಿಕರು ನಗರ ಪಾಲಿಕೆ ಅಧಿಕಾರಿಗಳು ಹಾಜರಿದ್ದರು

Ad
Ad
Nk Channel Final 21 09 2023
Ad