Bengaluru 29°C
Ad

ಡಾ. ಯತೀಂದ್ರ ಸಿದ್ದರಾಮಯ್ಯಗೆ ಎಂಎಲ್‍ಸಿ ಟಿಕೆಟ್ ಖಚಿತ

ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೆಗೌಡ ಪರ ಪ್ರಚಾರಕ್ಕೆ ಯತೀಂದ್ರ ಅವರು ಟಿ ನರಸೀಪುರಕ್ಕೆ ಆಗಮಿಸಿದ್ದ ವೇಳೆ ಈ ವಿಚಾರವನ್ನು ಸ್ವತಃ ಅವರೇ ಒಪ್ಪಿಕೊಂಡಿದ್ದಾರೆ.

ಮೈಸೂರು: ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರಗೆ  ಎಂಎಲ್‍ಸಿ ಟಿಕೆಟ್ ಸಿಗೋದು ಖಚಿತವಾಗಿದೆ.

ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೆಗೌಡ ಪರ ಪ್ರಚಾರಕ್ಕೆ ಯತೀಂದ್ರ ಅವರು ಟಿ ನರಸೀಪುರಕ್ಕೆ ಆಗಮಿಸಿದ್ದ ವೇಳೆ ಈ ವಿಚಾರವನ್ನು ಸ್ವತಃ ಅವರೇ ಒಪ್ಪಿಕೊಂಡಿದ್ದಾರೆ.

ಟಿ ನರಸೀಪುರದ ಶಾಲೆಗೆ ಅನುದಾನ ಬಿಡುಗಡೆ ಮಾಡಿಕೊಡುವಂತೆ ಶಿಕ್ಷಕಿ ಮನವಿ ಮಾಡಿಕೊಂಡಾಗ ‘ಈ ವೇಳೆ ನಾನು ಎಂಎಲ್ ಸಿ ಆಗಿ ಶಾಸಕನಾಗ್ತೀನಿ. ಶಾಸಕರ ಅನುದಾನದಲ್ಲಿ ಹಣ ಹಾಕುತ್ತೇನೆ ಎಂದಿದ್ದಾರೆ.

ನಮ್ಮ ತಂದೆಯವರ ಕ್ಷೇತ್ರಕ್ಕೆ ಶಾಲೆ ಬರೋ ಕಾರಣ ಅವರ ಬಳಿ ಮಾತನಾಡಿ ಅವರಿಂದಲೂ ಅನುದಾನ ಕೊಡಿಸ್ತೇನೆ ಎಂದು ಯತೀಂದ್ರ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಈ ಮೂಲಕ ಯತೀಂದ್ರ ತಾವು ಎಂಎಲ್ ಸಿ ಆಗೋದರ ಬಗ್ಗೆ ಸುಳಿವು ನೀಡಿದ್ದಾರೆ.

Ad
Ad
Nk Channel Final 21 09 2023
Ad