Bengaluru 26°C
Ad

ತಗಡೂರಿನಲ್ಲಿ ವಾಂತಿ ಭೇದಿ ಹಿನ್ನೆಲೆ : ಗ್ರಾಮಕ್ಕೆ ಡಾ.ಯತೀಂದ್ರ ದಿಡೀರ್ ಭೇಟಿ

: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ಗ್ರಾಮಸ್ಥರಿಗೆ ವಾಂತಿಭೇದಿ ಕಾಣಿಸಿಕೊಂಡು ಸುಮಾರು 114 ಹೆಚ್ಚು ರೋಗಿಗಳಿಗೆ ಕಾಲರಾ ರೋಗ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆಶ್ರಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಂಜನಗೂಡು: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ಗ್ರಾಮಸ್ಥರಿಗೆ ವಾಂತಿಭೇದಿ ಕಾಣಿಸಿಕೊಂಡು ಸುಮಾರು 114 ಹೆಚ್ಚು ರೋಗಿಗಳಿಗೆ ಕಾಲರಾ ರೋಗ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆಶ್ರಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad
300x250 2

ಕಲುಷಿತ ನೀರು ಸೇವನೆಯಿಂದ ಗ್ರಾಮಸ್ಥರಿಗೆ ವಾಂತಿಭೇದಿ ಕಾಣಿಸಿಕೊಂಡು ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಕಾಲರಾ ರೋಗದ ಬಗ್ಗೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು. ಗ್ರಾಮದಲ್ಲಿ ಈಗಾಗಲೇ ನಾಲ್ಕಕ್ಕೂ ಹೆಚ್ಚು ಹೊಸದಾಗಿ ಬೋರ್ವೆಲ್ ಕೊರೆಸಲಾಗುತ್ತಿದೆ. ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಗ್ರಾಮಸ್ಥರ ಆರೋಗ್ಯವನ್ನು ವಿಚಾರಿಸಿ ಆದಷ್ಟು ಗ್ರಾಮದಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಇನ್ನೂ ರೋಗಿಗಳ ಮನೆಗಳಿಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಸಂತಾನ ಹೇಳಿ, ಧೈರ್ಯವಾಗಿ ಇರಿ ನಾವು ನಿಮ್ಮೊಂದಿಗೆ ಸದಾ ಇರುತ್ತೇವೆ ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಅಭಯ ನೀಡಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಕುಮಾರಸ್ವಾಮಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ಈಶ್ವರ್, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಹಾಜರಿದ್ದರು.

Ad
Ad
Nk Channel Final 21 09 2023
Ad