News Karnataka Kannada
Monday, April 29 2024
ಮೈಸೂರು

ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಸಿಎಂ ಚಾಲನೆ: ಚಿನ್ನದ ಅಂಬಾರಿ ಹೊತ್ತು ಸಾಗಿದ ಅಭಿಮನ್ಯು

Myosre Cm
Photo Credit : News Kannada

ಮೈಸೂರು: ನಾಡಹಬ್ಬ ದಸರಾ ಜಂಬೂಸವಾರಿಗೆ ಚಾಮುಂಡಿಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯನವರು ಇದೀಗ ಚಾಲನೆ ನೀಡಿದ್ದಾರೆ. ಇನ್ನು ದಸರಾವನ್ನು ರಾಜ್ಯಾದ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅದರಂತೆ ಮೈಸೂರಿನಲ್ಲಿ ದಸರಾ ಹಬ್ಬವನ್ನು ವೈಭವಪೂರಿತವಾಗಿ ಆಚರಿಸಲಾಗುತ್ತಿದ್ದು, ಕಳೆದ 9 ದಿನಗಳಿಂದ ಚಾಮುಂಡೇಶ್ವರಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಅಲಂಕಾರ ಮಾಡಿ ಪೂಜಿಸಲಾಗುತ್ತಿದೆ.

ಸತತ 4ನೇ ಬಾರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ಸಾಗುತ್ತಿದೆ. ಇನ್ನು ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ ಹಾಗೂ ವಿಜಯಾ ಸಾಥ್ ನೀಡುತ್ತಿವೆ. ಅರಮನೆಯಿಂದ ಬನ್ನಿಮಂಟಪದವರೆಗೆ ಈ ಮೆರವಣಿಗೆ ನಡೆಯಲಿದೆ. ಜಂಬೂಸವಾರಿಯಲ್ಲಿ ಬರೊಬ್ಬರಿ 49 ಸ್ತಬ್ದಚಿತ್ರಗಳು, ವಿವಿಧ ಕಲಾತಂಡಗಳು ಭಾಗಿಯಾಗಿದ್ದು, ಲಕ್ಷಾಂತರ ಜನರು ದಸರಾ ಜಂಬೂಸವಾರಿಗೆ ಸಾಕ್ಷಿಯಾಗಿದ್ದಾರೆ.

ಅರಮನೆಯಿಂದ ಶುರುವಾದ ಜಂಬೂ ಸವಾರಿ, ಕೆ.ಆರ್.ಸರ್ಕಲ್ , ಆರ್ಯವೇದ ಸರ್ಕಲ್‌, ತಿಲಕ್ ನಗರ, ಬಂಬೂ ಬಜಾರ್ ಮೂಲಕ ಬನ್ನಿ ಮಂಟಪ್ಪಕ್ಕೆ ತಲುಪಲಿದೆ. ಸುಮಾರು 4 ರಿಂದ 5 ಕಿಲೋ ಮೀಟರ್ ಈ ಸವಾರಿ ನಡೆಯಲಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು