ಮೈಸೂರು: ಪ್ಲಾಸ್ಟಿಕ್ ಮುಕ್ತ ದೇಶವನ್ನಾಗಿಸಲು ಮನೆಗೊಂದು ಮರ ಬೆಳೆಸುವ ಮೂಲಕ ಪ್ರತಿಯೊಬ್ಬರೂ ಪರಿಸರವನ್ನು ಉಳಿಸಿ ಬೆಳೆಸಬೇಕೆಂದು ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಸಲಹೆ ನೀಡಿದರು.

ಮೈಸೂರು ನಗರದ ದೇವರಾಜ ಮಾರ್ಕೆಟ್ ನಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆ, ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ಪ್ಲಾಸ್ಟಿಕ್ ಬ್ಯಾಕ್ ಬಿಡಿ ಬಟ್ಟೆ ಬ್ಯಾಗ್ ಹಿಡಿ ಎಂಬ ಜಾಗೃತಿ ಕಾರ್ಯಕ್ರಮದಲ್ಲಿ ಗ್ರಾಹಕರಿಗೆ ಹಾಗೂ ವ್ಯಾಪಾರಸ್ಥರಿಗೆ ಉಚಿತ ಬಟ್ಟೆ ಬ್ಯಾಗ್ ವಿತರಿಸಿ ಪ್ಲಾಸ್ಟಿಕ್ ನಿಂದ ಆಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಇದೇ ಸಂದರ್ಭದಲ್ಲಿ ಮಾಜಿನಗರ ಪಾಲಿಕಾ ಸದಸ್ಯರಾದ ಪ್ರಮೀಳಾ ಭರತ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ರಾಜ್ಯ ಸಂಚಾಲಕ ರವಿಶಂಕರ್, ಎಸ್ ಎನ್ ರಾಜೇಶ್, ಚರಣ್, ಮೈಸೂರು ಮಹಾ ನಗರ ಪಾಲಿಕೆ ವಲಯ ಕಚೇರಿ 06 ರ ಪರಿಸರ ಅಭಿಯಂತರರು ಮೈತ್ರಿ, ಹೆಲ್ತ್ ಇನ್ಸ್ಪೆಕ್ಟರ್ ಮಂಜುಕುಮಾರ್ ಹಾಜರಿದ್ದರು.