ಮೈಸೂರು: ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ವತಿಯಿಂದ ಬೆಂಗಳೂರಿನ ಕುಮಾರ ಪಾರ್ಕ್ ಬಳಿ ಇರುವ ಗಾಂಧಿ ಭವನದ ಸಭಾಂಗಣದಲ್ಲಿ ನ.11 ರಂದು ಆರ್ ಎಸ್ ಎಸ್ ವಿರುದ್ಧ ಡಿಎಸ್ಎಸ್ ಪ್ರತಿರೋಧ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಜಿಲ್ಲಾ ಸಂಯೋಜಕ ಕಾರ್ಯ ಬಸವಣ್ಣ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಾತಿ ಧರ್ಮದ ವಿರುದ್ಧ ಕಲಹ ಸೃಷ್ಟಿಸಿ ಬೆಂಕಿ ಹೆಚ್ಚುತ್ತಿರುವ ಹಾಗೂ ಸಂವಿಧಾನ, ಪ್ರಜಾಪ್ರಭುತ್ವಕ್ಕೆ ಕಂಟಕಪ್ರಾಯವಾಗಿ ಬ್ರಾಹ್ಮಣ್ಯದ ಪಾರಮ್ಯವನ್ನು ಮೆರೆಸಲು ಮುಂದಾಗಿರುವ ಆರ್ ಎಸ್ ಎಸ್ ಹಾಗೂ ಬಿಜೆಪಿಯ ಕುತಂತ್ರವನ್ನು ಹಿಮ್ಮಟ್ಟಿಸುವುದು ಮತ್ತು ಸಂವಿಧಾನದ ರಕ್ಷಣೆಗೆ ಒಗ್ಗಟ್ಟಾಗುವುದು ಸಮಾವೇಶದ ಉದ್ದೇಶವಾಗಿದೆ.

ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ದಸಂಸ ಹಿರಿಯ ಮುಖಂಡರಾದ ಮಾವಳ್ಳಿ ಶಂಕರ್, ಗುರುಪ್ರಸಾದ್ ಕೆರಗೋಡು, ವಿ.ನಾಗರಾಜ್, ಎನ್.ವೆಂಕಟೇಶ್, ಇಂದೂಧರ ಹೊನ್ನಾಪುರ, ಎನ್.ಮುನಿಸ್ವಾಮಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.