Ad

ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ವಿದ್ಯುತ್ ಅವಘಡ: ತಪ್ಪಿದ ಭಾರೀ ಅನಾಹುತ

ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು, ಭಾರೀ ಅನಾಹುತ ತಪ್ಪಿದೆ.

ಮೈಸೂರು : ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು, ಭಾರೀ ಅನಾಹುತ ತಪ್ಪಿದೆ.

Ad
300x250 2

ವಿದ್ಯುತ್ ಪೆಟ್ಟಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ  ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್ ಪೆಟ್ಟಿಗೆಯಲ್ಲಿನ ಶಬ್ದ ಕೇಳುತ್ತಿದ್ದಂತೆ ವಿದ್ಯಾರ್ಥಿಗಳು ಹೊರಗೆ ಓಡಿ ಬಂದಿದ್ದಾರೆ.

ಈ ಹಿಂದೆ ವಿದ್ಯುತ್ ರಿಪೇರಿ ಮಾಡಿಸುವಂತೆ ಅಧಿಕಾರಿಗಳಿಗೆ ವಿದ್ಯಾರ್ಥಿಗಳು ಮನವಿ ಮಾಡಿದ್ದರು. ಅಧಿಕಾರಿಗಳ ನಿರ್ಲಕ್ಷದಿಂದ ಹೊತ್ತಿ ಉರಿದು, ಡಿಪಿ ಸಿಡಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Ad
Ad
Nk Channel Final 21 09 2023
Ad