ನಂಜನಗೂಡು: ಗಣರಾಜ್ಯೋತ್ಸವ ಆಚರಣೆ ವೇಳೆ ರಾಷ್ಟ್ರನಾಯಕರಿಗೆ ಅಬಕಾರಿ ಇಲಾಖೆ ಅಧಿಕಾರಿಗಳು ಅಗೌರವ ಸೂಚಿಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.
ಮಹಾತ್ಮಗಾಂಧಿ ಹಾಗೂ ಅಂಬೇಡ್ಕರ್ ರವರ ಭಾವಚಿತ್ರವನ್ನ ಕಚೇರಿ ಬಳಿ ಇರುವ ಖಾಸಗಿ ವ್ಯಕ್ತಿಗಳ ನಿವಾಸದ ಮುಂದೆ ಗೋಡೆಗೆ ಒರಗಿಸಿ ಕಬ್ಬಿಣದ ಕಂಬಿಗೆ ನೇತುಹಾಕಿ ಕಿರಿದಾದ ಜಾಗದಲ್ಲಿ ಧ್ವಜಾರೋಹಣ ನೆರವೇರಿಸಿ ಅಗೌರವ ಸೂಚಿಸಿದ್ದಾರೆ.
ಯಾವುದೇ ರಾಷ್ಟ್ರನಾಯಕರ ಭಾವಚಿತ್ರಗಳನ್ನ ಸರ್ಕಾರಿ ಕಚೇರಿಗಳಲ್ಲಿ ಗೌರವಯುತವಾಗಿ ಸ್ಥಾಪಿಸಬೇಕು ಹಾಗೂ ಸರ್ಕಾರಿ ಕಾರ್ಯಕ್ರಮಗಳ ವೇಳೆ ಸ್ಮರಣೆ ಮಾಡಬೇಕೆಂಬ ಕಟ್ಟುನಿಟ್ಟಿನ ನಿಯಮಗಳಿವೆ. ಆದ್ರೆ ನಂಜನಗೂಡಿನ ಅಬಕಾರಿ ಇಲಾಖೆ ಅಧಿಕಾರಿಗಳು ಗಣರಾಜ್ಯೋತ್ಸವ ಆಚರಣೆ ವೇಳೆ ರಾಷ್ಟ್ರನಾಯಕರಿಗೆ ಅಗೌರವ ಸೂಚಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದೆ.

