ಮೈಸೂರು: ವಿದ್ಯುತ್ ತಂತಿ ಕಟ್ಟಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ರೈತ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ದೊಡ್ಡನಹುಂಡಿ ಗ್ರಾಮದಲ್ಲಿ ನಡೆದಿದೆ.
ಕೆಂಪಯ್ಯ 70 ವರ್ಷ ಮೃತ ದುರ್ದೈವಿ. ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

