ಮೈಸೂರು: ಮೈಕ್ರೋ ಫೈನಾನ್ಸ್ ವಿರುದ್ಧ ರೈತರು ಸಿಡಿದೆದ್ದಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಬಳಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಇಬ್ಬರ ಸಾವನ್ನಪ್ಪಿದ್ದು, ಅನ್ನದಾತರು ಆಕ್ರೋಶಗೊಂಡಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮೈಕ್ರೋ ಫೈನಾನ್ಸ್ ಕಿತ್ತೊಗೆಯುವಂತೆ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರದ ಆದೇಶಕ್ಕೆ ಕಿಮ್ಮತ್ತಿಲ್ಲ. ಮೈಕ್ರೋ ಫೈನಾನ್ಸ್ ತಮ್ಮ ಚಾಳಿ ಮುಂದುವರೆಸಿದ್ದಾರೆಂದು ಆಕ್ರೋಶ ಹೊರಹಾಕಿದರು. ರಾಜ್ಯದ ಸಂಸದರು, ಶಾಸಕರಿಗೆ ರೈತರು ಹಿಡಿಶಾಪ ಹಾಕಿದ್ದಾರೆ.
ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸಾವನ್ನಪ್ಪಿರುವವರ ಕುಟುಂಬಕ್ಕೆ ಸಾಂತ್ವಾನ ಹೇಳುವ ಕೆಲಸ ಆಗ್ತಿಲ್ಲ. ಜಿಲ್ಲಾಡಳಿತ, ಸರ್ಕಾರ ಜನ ಸಾಮಾನ್ಯರ ಪರವಾಗಿದ್ದೇವೆ ಎಂಬ ಸಂದೇಶ ಕೊಡಬೇಕು. ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಮೈಸೂರಿನಲ್ಲಿ ರೈತರ ಎಚ್ಚರಿಕೆ ನೀಡಿದ್ದಾರೆ.