ನಂಜನಗೂಡು: ನಗರದ ತಾಲ್ಲೂಕು ಪಂಚಾಯಿತಿ ಕಛೇರಿಯ ಮುಂದೆ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ದಿಢೀರ್ ಪ್ರತಿಭಟನೆ ನಡೆಸಲಾಯಿತು.

ರೈತ ಸಂಘ ಮತ್ತು ಹಸಿರು ಸೇನೆಯ ತಾಲ್ಲೂಕು ಅಧ್ಯಕ್ಷ ಸತೀಶ್ ರಾವ್ ನೇತೃತ್ವದಲ್ಲಿ ಜಮಾಯಿಸಿದ ರೈತರು ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಾಲ್ಲೂಕು ಅಧ್ಯಕ್ಷ ಸತೀಶ್ ರಾವ್ ಮಾತನಾಡಿ, ಬಡವರಿಗೆ ಇಂದು ನ್ಯಾಯ ಸಿಗುತ್ತಿಲ್ಲ. ಹುಲ್ಲಹಳ್ಳಿ ಹೋಬಳಿಯ ಹಾಡ್ಯ ಗ್ರಾಮದಲ್ಲಿ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದ ರಂಗನಾಯಕ ಎಂಬ ವ್ಯಕ್ತಿಗೆ ಸರ್ಕಾರದಿಂದ ನಿವೇಶನವನ್ನು ಸರ್ಕಾರ ನೀಡುತ್ತದೆ.

ನಂತರ ಆ ಜಾಗದಲ್ಲಿ ಸರ್ಕಾರಿ ಶಾಲೆಯನ್ನು ನಿರ್ಮಾಣ ಮಾಡಲಾಗುತ್ತದೆ. ಗ್ರಾಮ ಪಂಚಾಯತಿ ಆಡಳಿತ ಆ ವ್ಯಕ್ತಿಗೆ ಮತ್ತೊಂದು ನಿವೇಶನವನ್ನು ನೀಡುತ್ತದೆ. ಆ ಜಾಗದ ಪಕ್ಕದಲ್ಲಿರುವ ವ್ಯಕ್ತಿಯು ಮಾದಮ್ಮ ಲೇಟ್ ರಂಗನಾಯಕ ಎಂಬುವರಿಗೆ ತೊಂದರೆಯನ್ನು ನೀಡುತ್ತಾ ಬಂದಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ.

ಅಧಿಕಾರಿಗಳು ಕಾನೂನು ರೀತಿ ಕ್ರಮ ಕೈಗೊಳ್ಳದೆ ಕಾನೂನು ಉಲ್ಲಂಘನೆ ಮಾಡುತ್ತಿರುವ ವ್ಯಕ್ತಿಯ ಪರವಾಗಿ ಅಧಿಕಾರಿಗಳು ನಿಂತಿದ್ದಾರೆ. ಇದಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳನ್ನು ತಮ್ಮ ಹತೋಟಿಗೆ ತೆಗೆದುಕೊಂಡಿಲ್ಲ . ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿದರು. ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕಸಬಾ ಹೋಬಳಿ ಅಧ್ಯಕ್ಷ ಮಹದೇವನಾಯಕ, ರಮೇಶ್, ಸೋಮಣ್ಣ, ಸೋಮೇಶ್, ಶ್ವೇತಾ, ಮಹದೇವನಾಯಕ, ಹಾಡ್ಯದಹುಂಡಿ ನಾಗರಾಜ್ ನಾಯಕ ಸೇರಿದಂತೆ ಹಲವರು ಭಾಗವಹಿಸಿದ್ದರು.