ಮೈಸೂರು : ಫೆಂಗಲ್ ಚಂಡಮಾರುತದ ಎಫೆಕ್ಟ್ ನಿಂದ ನಿರಂತರ ಮಳೆಗೆ ಭತ್ತದ ಬೆಳೆ ನೆಲಕಚ್ಚಿದ ಘಟನೆ ನಡೆದಿದೆ. ನೂರಕ್ಕೂ ಹೆಚ್ಚು ಎಕರೆಯಲ್ಲಿ ಭತ್ತದ ಬೆಳೆ ಕಟಾವಿಗೆ ಬಂದಿತ್ತು.
ಕಬಿನಿ ನಾಲೆಯ ಹುಲ್ಲಹಳ್ಳಿ ರಾಂಪುರ ನಾಲೆಗಳ ವ್ಯಾಪ್ತಿಗೆ ಸೇರಿದ ಗ್ರಾಮದಲ್ಲಿ ಘಟನೆ ನಡೆದಿದ್ದು, ನಂಜನಗೂಡು ತಾಲ್ಲೂಕಿನ ಸುತ್ತೂರು ಹೊಸಕೋಟೆ ಬಿಳುಗಲಿ ಜಿ ಮಾರಳ್ಳಿ ಮೂಡಳ್ಳಿ ಅಲತ್ತೂರು ಸಾಲುಂಡಿ ಹರಿಹರಪುರ ತಾಯೂರು ಮುಂತಾದ ಗ್ರಾಮಗಳಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ.
ಮುಂಗಾರು ಫಸಲಿನಲ್ಲಿ ರೈತರು ಉತ್ತಮ ಭತ್ತವನ್ನು ಬೆಳೆದಿದ್ದರು. ಕಳೆದ ಮೂರು ನಾಲ್ಕು ದಿನಗಳಿಂದ ಧಾರಾಕಾರವಾಗಿ ಸುರಿದ ಭಾರಿ ಮಳೆ ಕಟಾವಿಗೆ ಬಂದಿದ್ದ ಬೆಳೆಗಳು ಮಳೆ ನೀರಿನಲ್ಲಿ ಸಿಲುಕಿ ಸಂಪೂರ್ಣ ನಾಶವಾಗಿದೆ. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಲು ಮನವಿ ಮಾಡಲಾಗಿದೆ.