ಮೈಸೂರು: ಇಂದು ಮುಸ್ಲಿಂಮರ ಪವಿತ್ರ ರಂಜಾನ್ ಹಬ್ಬದ ಹಿನ್ನಲೆ ಮೈಸೂರಿನಲ್ಲಿ ಸಂಭ್ರಮದಿಂದ ಆಚರಣೆ ಮಾಡಲಾಯಿತು. ಮಂಡಿ ಮೊಹಲ್ಲಾದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ಶಾಸಕರುಗಳಾದ ತನ್ವೀರ್ ಸೇಠ್,ಹರೀಶ್ ಗೌಡ, ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಸಹ ಸಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾದರು. ಪ್ರಾರ್ಥನೆ ಬಳಿಕ ಪರಸ್ಪರ ಮುಸ್ಲಿಂ ಬಾಂದವರು ಶುಭ ಹಾರೈಸಿಕೊಂಡರು.