ಮೈಸೂರು : ಅರಮನೆಯ ಆವರಣದಲ್ಲಿರುವ ದಸರಾ ಗಜಪಡೆಯ ಕಂಜನ್ ಹಾಗೂ ಧನಂಜಯ ಆನೆ ನಡುವೆ ಊಟ ಮಾಡುವಾಗ ಗಲಾಟೆ ನಡೆದಿದೆ. ಆಕ್ರೋಶಗೊಂಡ ಧನಂಜಯ ಆನೆ ಕಂಜನ್ ಆನೆ ಮೇಲೆ ದಾಳಿಗೆ ಮುಂದಾಗಿದೆ. ಇದರಿಂದ ಬೆದರಿದ ಕಂಜನ್ ಆನೆ ಮಾವುತನಿಲ್ಲದೆ ಅರಮನೆಯ ಜಯ ಮಾರ್ತಾಂಡ ಮುಖ್ಯ ದ್ವಾರದ ಪಕ್ಕದ ಕೋಡಿ ಸೋಮೇಶ್ವರ ದೇಗುಲದ ದ್ವಾರದಿಂದ ಆಚೆ ಓಡಿ ಬಂದಿದೆ. ಆದರೂ ಬೆನ್ನು ಬಿಡದ ಧನಂಜಯ ಆನೆ ಕಂಜನ್ ಆನೆಯನ್ನು ಅಟ್ಟಿಸಿಕೊಂಡು ಬಂದಿದೆ.
ರದಿಂದ ಹೊರಬಂದ ಆನೆ, ದೊಡ್ಡಕೆರೆ ಮೈದಾನ ಬಳಿ ಬ್ಯಾರಿಕೇಡ್ ತಳ್ಳಿಕೊಂಡು ರಸ್ತಗೆ ಎಂಟ್ರಿಕೊಟ್ಟಿದೆ. ಏಕಾಏಕಿ ಆನೆಯ ಆಗಮನದಿಂದ ಗಾಬರಿಯಾದ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಆನೆಗಳನ್ನು ನಿಯಂತ್ರಿಸಲು ಹರಸಾಹಸಪಟ್ಟ ಮಾವುತರು ಮತ್ತು ಅಧಿಕಾರಿಗಳು ಕೊನೆಗೆ ಅವನ್ನು ಒಳಗೆ ಕರೆದುಕೊಂಡು ಹೋಗುವಲ್ಲಿ ಯಶಸ್ವಿಯಾದರು. ಮಾವುತರು ಹಾಗೂ ಅಧಿಕಾರಿಗಳ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ ಎಂದು ಹೇಳಲಾಗುತ್ತಿದೆ.
Ad