Categories: ಮೈಸೂರು

ಮೈಸೂರಿನಲ್ಲಿ ಫಿಲ್ಮ್​ಸಿಟಿ ನಿರ್ಮಾಣದ ಘೋಷಣೆ ಮಾಡಿದ ಸಿಎಂ

ರಾಜ್ಯಕ್ಕೆ ಒಂದು ಫಿಲ್ಮ್​​ಸಿಟಿ ಬೇಕು ಎಂಬುದು ಚಿತ್ರರಂಗದವರ ಬಹುವರ್ಷಗಳ ಕೋರಿಕೆ. ಆದರೆ, ಅದು ಈವರೆಗೆ ಈಡೇರಿಲ್ಲ. ಸರ್ಕಾರಗಳು ಬದಲಾದಂತೆ ಇದನ್ನು ನಿರ್ಮಾಣ ಮಾಡಲು ನಿಗದಿಪಡಿಸಿದ ಜಾಗಗಳು ಕೂಡ ಬದಲಾಗುತ್ತಲೇ ಬಂದವು.

ಈ ಬಾರಿ ಬಜೆಟ್​ನಲ್ಲಿ ಮತ್ತೆ ಇದರ ಪ್ರಸ್ತಾಪ ಆಗಿದೆ. ಮೈಸೂರಿನಲ್ಲಿ ಫಿಲ್ಮ್​ ಸಿಟಿ ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್​ನಲ್ಲಿ ಘೋಷಿಸಿದ್ದಾರೆ. ಸರ್ಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿಯನ್ನು ನಿರ್ಮಿಸಲು ಈ ಬಾರಿ ಸಿದ್ದರಾಮಯ್ಯ ಅವರು ಮುಂದಾಗಿದ್ದಾರೆ.

ಸಿನಿಮಾ ಕೆಲಸಗಳಿಗೆ ಚಿತ್ರ ನಗರಿ ಅತ್ಯಗತ್ಯ. ಸದ್ಯ ಹೈದರಾಬಾದ್ ಮೊದಲಾದ ಕಡೆಗಳಿಗೆ ತೆರಳಿ ಸೆಟ್​ಗಳನ್ನು ನಿರ್ಮಿಸಿ ಶೂಟ್ ಮಾಡಲಾಗುತ್ತಿದೆ. ಕರ್ನಾಟಕದಲ್ಲೇ ಫಿಲ್ಮ್ ಸಿಟಿ ನಿರ್ಮಾಣ ಆದರೆ ಸಿನಿಮಾದವರು ಪರ ರಾಜ್ಯಕ್ಕೆ ತೆರಳುವುದು ತಪ್ಪಲಿದೆ. ಹೀಗಾಗಿ, ಅನೇಕ ವರ್ಷಗಳಿಂದ ಈ ಬೇಡಿಕೆ ಹಾಗೆಯೇ ಇದೆ.

Ashitha S

Recent Posts

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

10 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

27 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

41 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

57 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

1 hour ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

2 hours ago