Bengaluru 22°C
Ad

ಸಿಎಂ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಯಾವೆಲ್ಲ ಸೆಕ್ಷನ್ ದಾಖಲಿಸಿದ್ದಾರೆ?

ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈ ಸಂಬಂಧ ಜನಪ್ರತಿನಿಧಿಗಳ ಕೋರ್ಟ್ ಕೂಡ ಸಿಎಂ ಸಿದ್ಧರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಕೋರ್ಟ್ ಆದೇಶದಂತೆ ಸಿಎಎಂ ಸಿದ್ಧರಾಮಯ್ಯ ವಿರುದ್ಧ ಎ1 ಆರೋಪಿಯಾಗಿ ಮುಡಾ ಹಗರಣದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಮೈಸೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈ ಸಂಬಂಧ ಜನಪ್ರತಿನಿಧಿಗಳ ಕೋರ್ಟ್ ಕೂಡ ಸಿಎಂ ಸಿದ್ಧರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಕೋರ್ಟ್ ಆದೇಶದಂತೆ ಸಿಎಎಂ ಸಿದ್ಧರಾಮಯ್ಯ ವಿರುದ್ಧ ಎ1 ಆರೋಪಿಯಾಗಿ ಮುಡಾ ಹಗರಣದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇನ್ನು ಸಿದ್ಧರಾಮಯ್ಯ ಭಾಮೈದ ಮಲ್ಲಿಕಾರ್ಜನ ಸ್ವಾಮಿ ಎ3 ಆರೋಪಿಯಾದರೇ, ಎ.4 ಆರೋಪಿಯನ್ನಾಗಿ ಭೂ ಮಾಲೀಕ ದೇವರಾಜು ಹಾಗೂ ಇತರರು ಎ5 ಆರೋಪಿಯನ್ನಾಗಿ ಮಾಡಿ ಮೈಸೂರಿನ ಲೋಕಾಯುಕ್ತ ಎಸ್ಪಿ ಕಚೇರಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್​ 120 ಬಿ, 166, 403, 420, 426, 465, 468, 340, 351 ಅಡಿ ಎಫ್​ಐಆರ್ ದಾಖಲಾಗಿದೆ. ಹಾಗೇ ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲಾಗಿದೆ.

ಭ್ರಷ್ಟಾಚಾರ ತಡೆ ಕಾಯ್ದೆ 1988 , ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988, ಸೆಕ್ಷನ್​ 120 ಬಿ ಕ್ರಿಮಿನಲ್ ಪಿತೂರಿ, ಸೆ, 166 ಸಾರ್ವಜನಿಕ ಸೇವಕ‌ ಕಾನೂನು ಉಲ್ಲಂಘನೆ ಮಾಡುವುದು, ಸೆ 403 ಆಸ್ತಿಯ ದುರ್ಬಳಕೆ, ಸೆ 406 ನಂಬಿಕೆಯ ಉಲ್ಲಂಘನೆ, ಸೆ 420 ವಂಚನೆ, ಸೆ 426 ದುಷ್ಕೃತ್ಯವೆಸಗುವುದು, ಸೆ 465 ಪೋರ್ಜರಿ, ಸೆ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಪೋರ್ಜರಿ, ಸೆ 340 ಅಕ್ರಮ ಬಂಧನ, ಸೆ 351 ಇತರರಿಗೆ ಹಾನಿಯನ್ನುಂಟು ಮಾಡುವುದು.

Ad
Ad
Nk Channel Final 21 09 2023