ಮೈಸೂರು: ಮೊಬೈಲ್ ಟವರ್ ನೆಟ್ ವರ್ಕ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಇಟ್ಟಿಗೆ ಗೂಡಿನಲ್ಲಿ ನಡೆದಿದೆ.

ನೆಟ್ ವರ್ಕ್ ಟವರ್ ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿ ಅನಾಹುತವನ್ನು ತಪ್ಪಿಸಿದ್ದಾರೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.