ಮೈಸೂರು : ಹಳೆಯ ವಸ್ತು ಸಂಗ್ರಹಿಸಿದ್ದ ಗೋದಾಮಿಗಳಿಗೆ ಬೆಂಕಿ ತಗುಲಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಯಾರೋ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಒಂದರಿಂದ ಒಂದರಂತೆ ನಾಲ್ಕು ಗೋದಾಮುಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಹಳೆಯ ವಸ್ತುಗಳ್ನಿಟ್ಟಿದ್ದ ಗೋದಾಮು ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಮೈಸೂರಿನ ಎನ್.ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

