ಮೈಸೂರು: ಡಿ.ದೇವರಾಜ ಅರಸ್ ರಸ್ತೆಯಲ್ಲಿರುವ ಗಾರ್ಮೆಂಟ್ಸ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಭೀಮ್ ಜೀಸ್ ಅಂಗಡಿಯ ಎರಡನೇ ಫ್ಲೋರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಅರಿತ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಯತ್ನ ನಡೆಸುತ್ತಿದ್ದಾರೆ.
ಇನ್ನು ಬೆಂಕಿ ಕಾರಣ ದಟ್ಟವಾದ ಹೊಗೆ ಸಿಬ್ಬಂದಿಗಳ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.