ನಂಜನಗೂಡು; ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಪೇಪರ್ ಮಿಲ್ ಗೆ ಬೆಂಕಿ ಬಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಅಗ್ನಿಗೆ ಆಹುತಿಯಾಗಿರುವ ಘಟನೆ ನಂಜನಗೂಡು ನಗರದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ನಂಜನಗೂಡು ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಪೇಪರ್ ಮಿಲ್ ಕಾರ್ಖಾನೆಯಾಗಿದ್ದು, ಗೋಡಾನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ಪೇಪರ್ ಭಸ್ಮ ಮತ್ತು ಇತರೆ ವಸ್ತುಗಳು ಸುಟ್ಟು ಕರಖಲಾಗಿವೆ. ಮೈಸೂರು ಮತ್ತು ನಂಜನಗೂಡಿನ 6 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಸಲಾಗಿದ್ದು.
ಇಂದು ಬೆಳಗ್ಗಿನ ಜಾವದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗೋಡಾನ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.