Categories: ಮೈಸೂರು

ನಂಜನಗೂಡು ಕ್ಷೇತ್ರದಿಂದ ಮೊದಲ ನಾಮಪತ್ರ ಸಲ್ಲಿಕೆ

ನಂಜನಗೂಡು: ರಾಜ್ಯದಲ್ಲಿ 2023ರ ಸಾರ್ವತ್ರಿಕ ಚುನಾವಣೆಯ ಕಣ ರಂಗೇರಿದೆ. ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಮೊದಲ ನಾಮಪತ್ರ ಸಲ್ಲಿಕೆಯಾಗಿದ್ದು, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಹನುಮಯ್ಯ ಚುನಾವಣಾ ಅಧಿಕಾರಿ ಕೃಷ್ಣಮೂರ್ತಿ ಅವರಿಗೆ ನಾಮಪತ್ರವನ್ನು ಸಲ್ಲಿಕೆ ಮಾಡಿದರು.

ನಂಜನಗೂಡು ತಾಲ್ಲೂಕು ಆಡಳಿತ ಭವನಕ್ಕೆ‌ ತೆರಳಿ ನಾಮಪತ್ರ ಸಲ್ಲಿಸಿದರು. ಬಳಿಕ ಮಾತನಾಡಿ, ಅರವಿಂದ್ ಕ್ರೇಜಿವಾಲ್ ನೇತೃತ್ವದ ಸರ್ಕಾರದಲ್ಲಿ ಏನೆಲ್ಲಾ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅದನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸುತ್ತಿದ್ದೇವೆ. ಪ್ರತಿ ಗ್ರಾಮಕ್ಕೂ ಭೇಟಿ ನೀಡಿ, ಮನೆ ಮನೆ ಪ್ರಚಾರ ನಡೆಸುತ್ತಿದ್ದೇವೆ. ಆಮ್ ಆದ್ಮಿ ಪಕ್ಷಕ್ಕೆ ಜನರು ಬೆಂಬಲ ಸೂಚಿಸಿದ್ದಾರೆ. ಯಾವುದೇ ಕಾರಣಕ್ಕೂ ನಾಮಪತ್ರವನ್ನು ಹಿಂಪಡೆಯುವ ಮಾತೇ ಇಲ್ಲ. ಸ್ಪರ್ಧೆ ಮಾಡುತ್ತೇನೆ. ಕ್ಷೇತ್ರದ ಜನರು ನನಗೊಂದು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.

ಆಮ್ ಆದ್ಮಿ ಪಕ್ಷದ ತಾಲೂಕು ಅಧ್ಯಕ್ಷ ವೀರೇಶ್ ಕುಮಾರ್ ಮಾತನಾಡಿ, ಜನರು ಯಾವುದೇ ಆಮಿಷಕ್ಕೆ ಒಳಗಾಗದೆ, ಮತವನ್ನು ಚಲಾವಣೆ ಮಾಡಬೇಕು. ಬಿಜೆಪಿ ಸರ್ಕಾರ ಗಾಳಿ ಮತ್ತು ಬಿಸಿಲನ್ನು ಬಿಟ್ಟು ಎಲ್ಲದಕ್ಕೂ ತೆರಿಗೆಯನ್ನು ವಿಧಿಸಿದೆ. ಆಮ್ ಆದ್ಮಿ ಪಕ್ಷವು 224 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿದ್ದೇವೆ. ಸುಮಾರು 40 ಕ್ಷೇತ್ರಗಳಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ತಾಲೂಕು ಅಧ್ಯಕ್ಷ ವೀರೇಶ್ ಕುಮಾರ್, ಕಾರ್ಮಿಕ ವಿಭಾಗದ ಅಧ್ಯಕ್ಷ ಮಂಜು, ಪೂರ್ಣಿಮಾ ಭಾಗವಹಿಸಿದ್ದರು.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago