ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 170 ಕೋಟಿ ವೆಚ್ಚದ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಕಟ್ಟಡ ಹಾಗೂ ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
Ad
ಹಾಗೆಯೇ 49 ಕೋಟಿ ರೂ ವೆಚ್ಚದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ 3,4 ನೇ ಅಂತಸ್ತಿನ ಕಟ್ಟಡ ಹಾಗೂ ವಸತಿ ನಿಲಯದ 3 ನೇ ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನೂ ನೆರವೇರಿಸಿದರು.
Ad
ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಹರೀಶ್ ಗೌಡ, ಡಾ.ತಿಮ್ಮಯ್ಯ, ಯತೀಂದ್ರ ಸಿದ್ದರಾಮಯ್ಯ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
Ad
Ad