ಮೈಸೂರು : ಅಡುಗೆ ಅನಿಲ ಸೋರಿಕೆಗೊಂಡ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣಾವಾಗಿ ಸಾವನಪ್ಪಿದ್ದಾರೆ. ಈ ಘಟನೆ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದೆ. ಬಟ್ಟೆ ಐರನ್ ಕೆಲಸ ಮಾಡುತ್ತಿದ್ದ ಮಂಜುಳಾ (39), ಕುಮಾರಸ್ವಾಮಿ (45), ಅರ್ಚನಾ (19), ಸ್ವಾತಿ (17) ಮೃತ ದುರ್ದೈವಿಗಳು.
ಮಾಹಿತಿ ತಿಳಿದ ಪೊಲೀಸರ ಕಮೀಷನರ್ ರಮೇಶ್ ಬಾನೋತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಅಡುಗೆ ಅನಿಲ ಸೋರಿಕೆಗೊಂಡು ಉಸಿರು ಗಟ್ಟಿ ಸಾವನಪ್ಪಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

