News Karnataka Kannada
Monday, April 29 2024
ಮೈಸೂರು

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಿನ್ನೆಲೆ: ನಿಲ್ಲದ ಸಾರಿಗೆ ಬಸ್ ಗಳು, ವಿದ್ಯಾರ್ಥಿಗಳ ಪರದಾಟ

Free bus travel for women: Non-stop transport buses, students scramble
Photo Credit : News Kannada

ನಂಜನಗೂಡು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಬಿಸಿ ತಟ್ಟಿದೆ.

ನಂಜನಗೂಡು – ಗುಂಡ್ಲುಪೇಟೆ ಮುಖ್ಯ ರಸ್ತೆಯಲ್ಲಿರುವ ಹೊಸಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ಕೆಎಸ್ ಆರ್ ಟಿಸಿ ಬಸ್ ಚಾಲಕರು ಬಸ್ ನಿಲ್ಲಿಸದೆ ಅತಿವೇಗವಾಗಿ ಚಾಲನೆ ಮಾಡಿಕೊಂಡು ಹೋಗುತ್ತಿದ್ದಾರೆ.

ಇದರಿಂದ ದಿನ ನಿತ್ಯ ಶಾಲಾ – ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಹಾಗೂ ಕಾರ್ಮಿಕರಿಗೆ ಸಾರ್ವಜನಿಕರಿಗೆ ತೊಂದರೆಯಾಗಿದೆ. ಬಸ್ ನಿಲ್ಲಿಸದ ಕಾರಣ ವಿದ್ಯಾರ್ಥಿಗಳು ಆಟೋದಲ್ಲಿ ಪ್ರಯಾಣ ಮಾಡಿದ್ದಾರೆ. ಇನ್ನೂ ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳು ತರಗತಿಗಳಿಗೆ ತೆರಳಲು ತುಂಬಾ ತೊಂದರೆಯಾಗಿದೆ.

ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಿದ ಪರಿಣಾಮವಾಗಿ ವಿದ್ಯಾರ್ಥಿಗಳಿಗೆ ಬಸ್ ಗಳಲ್ಲಿ ನೂಕು ನುಗ್ಗಲು ಉಂಟಾಗುತ್ತಿದ್ದು, ಇದರಿಂದ ಹೆಚ್ಚಿನ ಸಾರಿಗೆ ಬಸ್ ಗಳನ್ನು ಬಿಡಬೇಕು ಎಂದು ಗ್ರಾಮದ ಮುಖಂಡ ಚಲುವಸ್ವಾಮಿ ಒತ್ತಾಯ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು