ಮೈಸೂರು: ಏಷಿಯನ್ ಪೇಂಟ್ಸ್ ಕಲರ್ ಅಕಾಡೆಮಿ ಮೈಸೂರು ವತಿಯಿಂದ ಮೈಸೂರಿನಲ್ಲಿ ಸಿಬ್ಬಂದಿಗಳಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿತ್ತು.
ಏಷಿಯನ್ ಪೇಂಟ್ಸ್ ಕಲರ್ ಅಕಾಡೆಮಿಯ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ದರ್ಶನ್ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾವು ಆರೋಗ್ಯವನ್ನು ಲೆಕ್ಕಿಸದೆ ದುಡಿಯುತ್ತೇವೆ.
ಆದರೆ ಅರೋಗ್ಯ ಕೈಕೊಟ್ಟಾಗ ದುಡಿದ ಹಣ ಒಯ್ದು ಸುರಿಯುತ್ತೇವೆ. ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹೃದಯಾಘಾತದಂತಹ ರೋಗಗಳು ಹೆಚ್ಚುತ್ತಿವೆ. ಆರೋಗ್ಯದತ್ತ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು ಎಂದರು.
ಸಿಬ್ಬಂದಿಗಳಿಗೆ ಉಚಿತವಾಗಿ ಆರೋಗ್ಯದ ಬಗ್ಗೆ ಸಲಹೆ ಸೂಚನೆಗಳು ಮತ್ತು ಔಷಧಿಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಡಾ.ಫಾಜಿಲಾ ಕರೀಂ, ಏಷಿಯನ್ ಪೇಂಟ್ಸ್ ಕಲರ್ ಅಕಾಡೆಮಿಯ ತಾಂತ್ರಿಕ ವಿಭಾಗದ ಮುಖ್ಯಸ್ಥ ದರ್ಶನ್, ಸಿಬ್ಬಂದಿಗಳಾದ ಕಿರಣ್ ಕುಮಾರ್, ಅಭಿಷೇಕ್, ಖಾನ್ ಸೇರಿದಂತೆ ಹಲವು ಸಿಬ್ಬಂದಿಗಳು ಹಾಜರಿದ್ದರು.

