ಮೈಸೂರು: ರಾಜಸ್ಥಾನದ ಗಂಗಾನಗರದಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಕಿಡಿಗೇಡಿಗಳನ್ನು ಗಲ್ಲಿಗೇರಿಸಿ ಎಂದು ಆಗ್ರಹಿಸಿ ಗಂಧದಗುಡಿ ಫೌಂಡೇಶನ್ ರಾಜ್ಯಾಧ್ಯಕ್ಷ ಆರ್ಯನ್ ಹಳೆ ಡಿಸಿ ಕಚೇರಿ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸಿದರು.

ದೇಶದಲ್ಲಿ ಮಹಿಳೆಯರು ಹಾಗೂ ಅಪ್ರಾಪ್ತ ಬಾಲಕಿಯರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿದೆ ಇದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಇಂತಹ ಕೃತ್ಯ ಎಸಗುವ ಆರೋಪಿಗಳಿಗೆ ಕ್ರೂರ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.