ಟಿ.ನರಸೀಪುರ: ಬಂಗಾಳ ಮೂಲದ ಯುವತಿಯನ್ನ ಕಾರಿನಲ್ಲಿ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳನ್ನ ಬಂಧಿಸುವಲ್ಲಿ ಟಿ.ನರಸೀಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಾರಿನಲ್ಲಿ ಬಂದ ಮೂವರು ತನ್ನನ್ನ ಅಪಹರಿಸಿ ಪಟ್ಟಣದ ಹೊರವಲಯದ ಮೂಗೂರು ಬಳಿಯ ಲಾಡ್ಜ್ ಒಂದಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ಥ ಯುವತಿ ದೂರು ನೀಡಿದ್ದಾರೆ. ಕೂಡಲೇ ಕಾರ್ಯಪ್ರವೃತರಾದ ಪೊಲೀಸರು ಮೂವರು ಆರೋಪಿಗಳನ್ನು ಬಂಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ.ಬಂಗಾಳದ 30 ವರ್ಷದ ಯುವತಿ ಅತ್ಯಾಚಾರಕ್ಕೆ ಒಳಗಾದವರು ಎನ್ನಲಾಗಿದೆ. ಪಟ್ಟಣದ ಕಬಾಬ್‌ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು ಭಾನುವಾರ ಕೆಲಸದ ಮೇಲೆ ಮೈಸೂರಿಗೆ ತೆರಳಿದ ರಾತ್ರಿ ಟಿ ನರಸೀಪುರಕ್ಕೆ ಹಿಂದಿರುಗಿದಾಗ ಬಸ್‌ಸ್ಟ್ಯಾಂಡ್‌ಗೆ ಬಂದು ತಲುಪಿದೆ. ಈ ವೇಳೆ ಕಾರಿನಲ್ಲಿದ್ದ ಮೂವರು ಅಪರಿಚಿತರು ನನ್ನನ್ನು ಅಪಹರಿಸಿ ಲಾಡ್ಜ್ ಗೆ ಕರೆದೊಯ್ದು ಅಕ್ರಮವಾಗಿ ಬಂಧಿಸಿ ಸಾಮೂಹಿಕ ಅತ್ಯಾಚಾರ ನಡೆಸಿದರು.

ಅಲ್ಲದೇ ನನ್ನ ಮೇಲೆ ಮೇಲೆ ಹಲ್ಲೆ ನಡೆಸಿ ನನ್ನ ಬಳಿ ಇದ್ದ ಮೊಬೈಲ್‌ ಮತ್ತು ಐದು ಸಾವಿರ ರೂ. ಹಣವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ನರಸೀಪುರ ಪಟ್ಟಣ ಪೊಲೀಸರು ಕಾರ್ಯಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಸುವಲ್ಲಿ ಯಶಸ್ವಿಯಾಗಿದ್ದಾರೆ. ಕಿರಣ್‌ ಅಲಿಯಾಸ್‌ ಹುಚ್ಚ, ರಿಹಾನ್‌ಖಾನ್‌, ಕಿಶೋರ್‌ ಕುಮಾರ್‌ ಬಂತರು.ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ವೇಳೆ ಅಪಹರಣ ಕೃತ್ಯಕ್ಕೆ ಬಳಸಿದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.